ಮಲ್ಪೆ | ಬೋಟಿನಿಂದ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಮಲ್ಪೆ, ನ.22: ಮಲ್ಪೆ ದಕ್ಕೆಯಲ್ಲಿ ಬೋಟಿನಿಂದ ಮೀನು ಖಾಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನ.21ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಮಲ್ಪೆಯ ರವಿ ಟಿ.ಸಾಲ್ಯಾನ್(51) ಎಂದು ಗುರುತಿಸಲಾಗಿದೆ.
ಇವರು ಮಲ್ಪೆ ದಕ್ಕೆಯಲ್ಲಿ ಜಯಮಂಗಳ ಬೋಟಿನಲ್ಲಿ ಮೀನು ಖಾಲಿ ಮಾಡುತ್ತಿದ್ದು, ಈ ವೇಳೆ ಅವರು ಆಯತಪ್ಪಿ ನೀರಿಗೆ ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಮೇಲಕ್ಕೆತ್ತಿ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಈಗಾಗಲೇ ರವಿ ಸಾಲ್ಯಾನ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





