ಮಲ್ಪೆ | ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ದುರಂತ : ತನಿಖೆಗೆ ಉಸ್ತುವಾರಿ ಸಚಿವರ ಸೂಚನೆ

ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ : ಮಲ್ಪೆ ಕೋಡಿಬೆಂಗ್ರೆಯಲ್ಲಿ ದೋಣಿ ಮುಳುಗಿ ಚಾಮರಾಜನಗರದಿಂದ ಆಗಮಿಸಿದ್ದ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಘಟನೆಯಲ್ಲಿ ಗಾಯೊಂಡಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿರುವ ಸಚಿವರು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಮತ್ತು ಘಟನೆಯ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Next Story





