ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಉಡುಪಿ, ಜ.11: ಪ್ರತಿದಿನ ಮದ್ಯ ಸೇವಿಸಿ ಬಂದು ಮನೆಯಲ್ಲಿ ಗಲಾಟೆ ಮಾಡುವ ನಾಗಪ್ಪ ಕೇರಿ (49) ಎಂಬವರು ಶನಿವಾರ ಸಂಜೆ ಮನೆಯ ಸಮೀಪದ ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಉಡುಪಿಯ ಮೂಡನಿಡಂಬೂರು ಗ್ರಾಮದ ಇವರು ಪ್ರತಿದಿನ ಕುಡಿದು ಮನೆಗೆ ಬಂದು ಹೆಂಡತಿಯೊಂದಿಗೆ ಜಗಳವಾಡುತಿದ್ದರು. ಶನಿವಾರ ಸಂಜೆ ಸಹ ಕುಡಿದು ಮನೆಗೆ ಬಂದು ಜಗಳವಾಡಿದ ಬಳಿಕ ಹೊರಗೆ ಹೋಗಿ ಮನೆಯ ಸಮೀಪದ ತೆಂಗಿನ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಕ್ಷಣ ನೆರೆಕೆರೆಯವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಜಿಲ್ಲಾಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





