ಮಲ್ಪೆ ದಕ್ಕೆಗೆ ಬಿದ್ದು ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ
ಮಲ್ಪೆ, ನ.25: ಮಲ್ಪೆ ಬಂದರಿನ ಧಕ್ಕೆಯ ನೀರಿಗೆ ಬಿದ್ದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಕ್ಲಿಟಸ್ ವಿ. (56) ಎಂದು ಗುರುತಿಸಲಾಗಿದೆ.
ಮೀನುಗಾರಿಕೆ ಬೋಟ್ನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ನ.22ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ನ.24ರಂದು ಬೆಳಗ್ಗೆ ಪಡುಕೆರೆ ಪಾಪನಾಶಿನಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





