ಶಿರ್ವ | ಬ್ಯಾಂಕಿನಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ
ಶಿರ್ವ, ನ.12: ಬ್ಯಾಂಕಿನ ಎರಡನೇ ಮಹಡಿಯಿಂದ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರ್ವದಲ್ಲಿ ನ.11ರಂದು ನಡೆದಿದೆ.
ಮೃತರನ್ನು ಬೆಳಪು ಗ್ರಾಮದ ಮೋಹನ್ ಆಚಾರ್ಯ(52) ಎಂದು ಗುರುತಿಸಲಾಗಿದೆ.
ಇವರು ಬೆಳಗ್ಗೆ ಶಿರ್ವ ಗ್ರಾಮದ ಕೆನರಾ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರೆನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





