ಮಣಿಪಾಲ | ಬೈಕ್ ಡಿವೈಡರ್‌ಗೆ ಢಿಕ್ಕಿ: ಸವಾರ ಸ್ಥಳದಲ್ಲಿಯೇ ಮೃತ್ಯು

ಮಣಿಪಾಲ, ಜ.9: ಬೈಕೊಂದು ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜ.10ರಂದು ನಸುಕಿನ ವೇಳೆ 3ಗಂಟೆ ಸುಮಾರಿಗೆ ಲಕ್ಷ್ಮೀಂದ್ರ ನಗರದ ಸುಧಾ ಫನಿರ್ಚರ್ ಎದುರು ರಾಷ್ಟ್ರೀಯ ಹೆದ್ದಾರಿ 169ಎ ರಲ್ಲಿ ನಡೆದಿದೆ.
ಮೃತರನ್ನು ಕುಂಜಿಬೆಟ್ಟು ಬುಡ್ನಾರ್ ರಸ್ತೆ ನಿವಾಸಿ ಪ್ರವೀಣ್ ಶೆಟ್ಟಿ(36) ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪ್ರವೀಣ್ ಶೆಟ್ಟಿ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಇವರು ಒಂದೂವರೆ ಹಿಂದೆಯಷ್ಟೇ ವಿವಾಹವಾಗಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





