Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ರಾಷ್ಟ್ರೀಯ ಕ್ರೀಡಾ ದಿನಾಚರಣೆ;...

ಮಣಿಪಾಲ: ರಾಷ್ಟ್ರೀಯ ಕ್ರೀಡಾ ದಿನಾಚರಣೆ; ಅ.ಭಾ.ವಿ.ವಿ. ಚಿನ್ನದ ಪದಕ ವಿಜೇತ ಅಖಿಲೇಶ್ ಕೋಟಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ29 Aug 2023 8:37 PM IST
share
ಮಣಿಪಾಲ: ರಾಷ್ಟ್ರೀಯ ಕ್ರೀಡಾ ದಿನಾಚರಣೆ; ಅ.ಭಾ.ವಿ.ವಿ. ಚಿನ್ನದ ಪದಕ ವಿಜೇತ ಅಖಿಲೇಶ್ ಕೋಟಗೆ ಸನ್ಮಾನ

ಉಡುಪಿ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ಸ್ಪೋರ್ಟ್ಸ್ ಕೌನ್ಸಿಲ್ ಮಣಿಪಾಲ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಟಿ.ಸಿ.ಎ.ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಅಥ್ಲೆಟಿಕ್ಸ್ ಮತ್ತು ಕ್ರಿಕೆಟ್‌ನ ಕೋಚ್‌ಗಳಿಗೆ ರಿಫ್ರೆಶರ್ ಕ್ಲಿನಿಕ್‌ನ ಉದ್ಘಾಟನೆ ಮಣಿಪಾಲ ಕೆಎಂಸಿಯ ಡಾ.ಟಿಎಂಎ ಪೈ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಪೂರ್ಣ ಹಾಗೂ ಸಕ್ರಿಯ ಸಮಾಜದ ನಿರ್ಮಾಣದಲ್ಲಿ ಕ್ರೀಡೆಯ ಮಹತ್ವ ವನ್ನು ವಿವರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಸಿಸಿಐನ ಹಿರಿಯ ಅಧಿಕಾರಿ ಹಾಗೂ ಕೋಚ್ ಅರುಣ್ ಭಾರದ್ವಾಜ್, ಶಿಸ್ತು, ತಂಡಕ್ಕೆ ನಿಷ್ಠೆ ಹಾಗೂ ಹೋರಾಟದ ಕೆಚ್ಚನ್ನು ಕ್ರೀಡೆಯ ಮೂಲಕ ವೃದ್ಧಿಸಿಕೊಳ್ಳಬಹುದು. ತಾನು ಏನೇ ಸಾಧನೆ ಮಾಡಿದ್ದರೂ ಅದು ಕ್ರಿಕೆಟ್‌ನಿಂದ ಮಾತ್ರ ಎಂದರು.

ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್‌ನ ಕಾರ್ಯದರ್ಶಿ ರಾಜವೇಲು, ಉಡುಪಿ ಟಿಸಿಎ ಅಧ್ಯಕ್ಷ ಗೌತಮ್ ಶೆಟ್ಟಿ ಹಾಗೂ ಮಣಿಪಾಲ ಕೆಎಂಸಿಯ ಡೀನ್ ಡಾ.ಪದ್ಮರಾಜ್ ಹೆಗ್ಡೆ ಮಾತನಾಡಿದರು. ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕ್ರೀಡಾ ದಿನಾಚರಣೆಯ ಅಂಗವಾಗಿ ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಟ್ರಿಪಲ್ ಜಂಪ್‌ನಲ್ಲಿ ಚಿನ್ನದ ಪದಕ ದೊಂದಿಗೆ ಹಲವು ಪ್ರಶಸ್ತಿಗಳನ್ನು ಜಯಿಸಿರುವ ಅವಿನಾಶ್ ಕೋಟ ಅವರನ್ನು ನಗದು ಬಹುಮಾನದೊಂದಿಗೆ ಸನ್ಮಾನಿಸಲಾಯಿತು.

ಒರಿಸ್ಸಾದಲ್ಲಿ ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾಗ ಗಾಯಗೊಂಡ ಅಖಿಲೇಶ್ ಕೋಟ ಚಿಕಿತ್ಸೆ ಪಡೆಯು ತ್ತಿರುವ ಕಾರಣ ಅವರ ಪರವಾಗಿ ತಾಯಿ ಸುಮನ ಪ್ರಶಸ್ತಿಯನ್ನು ಸ್ವೀಕರಿಸಿದರು. ಕುಂದಾಪುರ ಹಾಗೂ ಕೋಟಗಳಲ್ಲಿ ಪ್ರಾರಂಭಿಕ ವಿದ್ಯಾಭ್ಯಾಸ ನಡೆಸಿರುವ ಅಖಿಲೇಶ್ ಕೋಟ, ಟ್ರಿಪಲ್ ಜಂಪ್‌ನಲ್ಲಿ ಸದ್ಯ ಭಾರತದ ಅಗ್ರಗಣ್ಯ ಅಥ್ಲೀಟ್ ಎಂದು ಉಡುಪಿ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆಂಪರಾಜ್, ಅಖಿಲೇಶ್‌ರನ್ನು ಪರಿಚಯಿಸುತ್ತಾ ತಿಳಿಸಿದರು.

ಮಾಹೆ ಸ್ಪೋರ್ಟ್ಸ್ ಕೌನ್ಸಿಲ್‌ನ ಕಾರ್ಯದರ್ಶಿ ಡಾ.ವಿನೋದ್ ನಾಯಕ್ ಅತಿಥಿಗಳನ್ನು ಸ್ವಾಗತಿಸಿದರು. ಮೋನಿಕಾ ಜಾಧವ್ ವಂದಿಸಿದರೆ, ರೀನಾ ಶರೀನ್ ಪ್ರವೀನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X