ಮಣಿಪಾಲ | ಡಿವೈಡರ್ಗೆ ಸ್ಕೂಟರ್ ಢಿಕ್ಕಿ : ಸವಾರ ಮೃತ್ಯು

ಸಾಂದರ್ಭಿಕ ಚಿತ್ರ
ಮಣಿಪಾಲ, ಡಿ.3: ಡಿವೈಡರ್ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಮೃತರನ್ನು ಮಣಿಪಾಲದ ವಿದ್ಯಾರ್ಥಿ ಶಶಾಂಕ್ ಎಂದು ಗುರುತಿಸಲಾಗಿದೆ.
ಹಿಂಬದಿ ಸವಾರೆ ರೇವಾಗುಪ್ತ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಸೋಮವಾರ ರಾತ್ರಿ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಸಮೀಪ ಘಟನೆ ನಡೆದಿದೆ. ಪರಿಣಾಮ ಸವಾರರಿಬ್ಬರೂ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಶಶಾಂಕ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





