ಮಣಿಪಾಲ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿ ಇರಿತ

ಮಣಿಪಾಲ, ಮೇ 13: ಭಗ್ನ ಪ್ರೇಮಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಣಿಪಾಲ ಶಾಂತಿನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗಂಭೀರವಾಗಿ ಗಾಯಗೊಂಡಿರುವ ಅಂಕೋಲ ಮೂಲದ ಯೋಗೀತಾ (23) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಾಂತಿನಗರದ ಐಡಿಯಲ್ ಬಿಲ್ಡಿಂಗ್‌ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದು, ಆಕೆಯನ್ನು ಆರೋಪಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಯೋಗೀತಾ ಆತನ ಪ್ರೀತಿಯನ್ನು ನಿರಾಕರಿಸಿದ್ದು, ಇದರಿಂದ ಕುಪಿತಗೊಂಡ ಆರೋಪಿ ಆಕೆಗೆ ಚೂರಿಯಿಂದ ಇರಿದು ಪರಾರಿ ಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




