Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ...

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಆಗ್ರಹಿಸಿ: ಮಣಿಪಾಲದಲ್ಲಿ ವಿದ್ಯಾರ್ಥಿ ಸಮೂಹದಿಂದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 July 2026 9:17 PM IST
share
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಆಗ್ರಹಿಸಿ: ಮಣಿಪಾಲದಲ್ಲಿ ವಿದ್ಯಾರ್ಥಿ ಸಮೂಹದಿಂದ ಬೃಹತ್ ಪ್ರತಿಭಟನೆ

ಉಡುಪಿ, ಜು.24: ನೀಟ್ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೋರಿಕೆಯನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಿಲ್ಲೆಯ ಸಾವಿರಾರು ಮಂದಿ ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಮಣಿಪಾಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮಣಿಪಾಲ ಕಾಯಿನ್ ಸರ್ಕಲ್ ಬಳಿಯಿಂದ ಡಿಸಿ ಕಚೇರಿ ತನಕದ ರ್ಯಾಲಿನಲ್ಲಿ ಸಾಗಿಬಂದ ಈ ವಿದ್ಯಾರ್ಥಿಗಳು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ನಿರಂತರ ಘೋಷಣೆ ಗಳನ್ನು ಕೂಗಿದರು. ಭಾರತ್ ಮಾತೆಗೆ ಜೈಕಾರ ಮೊಳಗಿಸಿದ ತಕ್ಷಣವೇ, ಹುದ್ದೆಯಿಂದ ಕೆಳಗಿಳಿದು ವಿದ್ಯಾರ್ಥಿಗಳಿಗೆ ನ್ಯಾಯ ನೀಡುವಂತೆ ಆಗ್ರಹಿಸಿದರು.

ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಕಳೆದ ಕೆಲವು ದಿನಗಳಿಂದ ಈ ವಿಷಯದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವನ್ನು ಸೂಚಿಸಿದರು. ಜಿಲ್ಲಾಕಾರಿಗಳ ಕಚೇರಿಯ ಸತ್ಯಾಗ್ರಹ ಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ವೈವಿಧ್ಯಮಯ ಘೋಷಣಾ ಫಲಕ, ಕರಪತ್ರಗಳನ್ನು ಪ್ರದರ್ಶಿಸಿದರು.

ಕೇಂದ್ರ ಸರಕಾರದ ವೈಫಲ್ಯದಿಂದ ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಯಾಗಿದ್ದು, 20ಕ್ಕೂ ಅಧಿಕ ಮಂದಿ ವಿದ್ಯಾರ್ಥಿ ಗಳು ಈಗಾಗಲೇ ಜೀವ ಕಳೆದುಕೊಂಡಿದ್ದಾರೆ. ಇದು ದುರಂತ ಎಂದು ಸಾರಿದ ವಿದ್ಯಾರ್ಥಿಗಳು ಮೌನ ಪ್ರಾರ್ಥನೆ ಮಾಡುವ ಮೂಲಕ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೋಹನ್ ಮಚಾದೋ ಮಾತನಾಡಿ, ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಶಿಕ್ಷಣ ಪಡೆ ಯುವ ಸಲುವಾಗಿ ಸಾಕಷ್ಟು ವರ್ಷ ಗಳನ್ನು ಮೀಸಲಿಡುತ್ತೇವೆ. ಆದರೆ ನಮ್ಮನ್ನು ಆಳುವ ಸರಕಾರ ನಾಚಿಕೆ ಬಿಟ್ಟು ಕುಳಿತುಕೊಂಡಿದೆ. ಶಿಕ್ಷಣ ಸಚಿವ ಯಾವುದೇ ಕಾರಣಕ್ಕೂ ಹುದ್ದೆಯಲ್ಲಿ ಮುಂದುವರಿಬಾರದು. ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದರು.

ವಿದ್ಯಾರ್ಥಿ ನಾಯಕಿ ಜೂನ್ ಮೆಹತಿ ಕೊಲ್ಕತ್ತಾ ಮಾತನಾಡಿದರು. ಉಡುಪಿ ಸಹಬಾಳ್ವೆ ಅಧ್ಯಕ್ಷ ಪ್ರೊ.ಕೆ. ಫಣಿರಾಜ್, ಮುಖಂಡ ವಿಶ್ವಾಸ್ ಅಮೀನ್, ದಲಿತ ಸಂಘರ್ಷ ಸಮಿತಿ ಪ್ರಮುಖರಾದ ಶ್ಯಾಮ್‌ರಾಜ್ ಬಿರ್ತಿ, ಪ್ರಶಾಂತ್ ಬಿರ್ತಿ, ಪ್ರಕಾಶ್ ಹೇರೂರು, ಎಸ್‌ಐಒ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X