ಮಜೂರು | ನ.25ರಂದು ಅನುಸ್ಮರಣಾ ಮಜ್ಲಿಸ್
ಕಾಪು, ನ.23: ಸುನ್ನೀ ಸಂಯುಕ್ತ ಜಮಾಅತ್ ಹಾಗೂ ಸುನ್ನೀ ಜಂ-ಇಯ್ಯತುಲ್ ಉಲಮಾ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್, ನೂರುಲ್ ಉಲಮಾ, ತಾಜುಲ್ ಫುಖಹಾಹ್ ಹಾಗೂ ನಮ್ಮಿಂದ ಅಗಲಿದ ಇನ್ನಿತರ ನಾಯಕರ ಹೆಸರಿನಲ್ಲಿ ಅನುಸ್ಮರಣಾ ಮಜ್ಲಿಸ್ ನ.25ರಂದು ಬೆಳಿಗ್ಗೆ 10 ಗಂಟೆಗೆ ಮಜೂರು ಮಲ್ಲಾರು ಬದ್ರಿಯಾ ಜುಮಾ ಮಸೀದಿಯಲ್ಲಿ ಜರಗಲಿದೆ.
ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ನೇತೃತ್ವ ವಹಿಸಲಿದ್ದು, ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ದುಆ ನೆರವೇರಿಸಲಿರುವರು. ಕರ್ನಾಟಕ ಉಲಮಾ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಬಹು ಟಿ.ಎಂ.ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ ಅನುಸ್ಮರಣಾ ಭಾಷಣ ಮಾಡಲಿದ್ದಾರೆ.
ನಾಯಿಬ್ ಖಾಝಿ ಅಬ್ದುರ್ರಹ್ಮಾನ್ ಮದನಿ ಮೂಳೂರು, ಉಲಮಾ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಎ.ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ ಅಬೂಬಕ್ಕರ್ ನೇಜಾರು ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಂಯುಕ್ತ ಜಮಾಅತ್ ಕಾರ್ಯದರ್ಶಿ ಹಾಜಿ ಎಂ.ಎ.ಬಾವು ಮೂಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





