Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೂ.1ರಿಂದ ಕರ್ನಾಟಕ ಕರಾವಳಿಯಲ್ಲಿ...

ಜೂ.1ರಿಂದ ಕರ್ನಾಟಕ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ವಾರ್ತಾಭಾರತಿವಾರ್ತಾಭಾರತಿ20 May 2026 8:03 PM IST
share
ಜೂ.1ರಿಂದ ಕರ್ನಾಟಕ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ, ಮೇ 20: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು /ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಗಳ ಮತ್ತು 10 ಅಶ್ವಶಕ್ತಿ (ಎಚ್‌ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಗಳನ್ನು 2026ರ ಜೂನ್ 1ರಿಂದ ಜುಲೈ 31ರವರೆಗೆ (ಉಭಯ ದಿನಗಳು ಸೇರಿದಂತೆ) ಅಂದರೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮರ್ಥ್ಯ ದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಈ ಅವಧಿಯಲ್ಲಿ ಕರಾವಳಿ ಸಮುದ್ರದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದ್ದು, ಹವಾಮಾನದ ವೈಪರೀತ್ಯದ ಮುನ್ಸೂಚನೆ ನೀಡಿದಾಗ ಅವು ಕಡ್ಡಾಯವಾಗಿ ಮುನ್ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಜೂನ್ 1ರಿಂದಲೇ ಕರಾವಳಿಯಲ್ಲಿ ಮೀನುಗಾರಿಕಾ ನಿಷೇಧ ಜಾರಿ ಗೊಳ್ಳುವುದರಿಂದ ಕಡ್ಡಾಯವಾಗಿ ಎಲ್ಲಾ ದೋಣಿ ಗಳು ಮೇ 31ರ ಒಳಗೆ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡಿದ ದೋಣಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆ ಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.

ಈ ಆದೇಶವನ್ನು ಜಿಲ್ಲೆಯ ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ತಪ್ಪದೇ ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X