ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರದ ಹಾಡು ಬಿಡುಗಡೆ

ಉಡುಪಿ, ಸೆ.11: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್‌ಪಿಆರ್ ಫಿಲ್ಮ್ಸ್ ಹರಿ ಪ್ರಸಾದ್ ರೈ ಸಹಯೋಗದಲ್ಲಿ ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಮಂಗಳವಾರ ಸಂಜೆ ಉಡುಪಿ ಕಲ್ಪನಾ ಥಿಯೇಟರ್‌ನಲ್ಲಿ ಜರಗಿತು.
ತುಳುನಾಡ ಬಾವುಟ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡ ಲಾಯಿತು ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ಉದ್ಯಮಿ ಮನೋಹರ್ ಶೆಟ್ಟಿ ಬಿಡುಗಡೆಗೊಳಿಸಿದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್ ಮಾತಾಡಿದರು.
ಇದೇ ಸಂದರ್ಭದಲ್ಲಿ ಸಮಾಜಮುಖಿ ಸಾಧಕಾರದ ರವಿ ಕಟಪಾಡಿ, ಸುಷ್ಮಾ ರಾಜ್, ಸಚಿನ್ ಶೆಟ್ಟಿ ಅವರನ್ನು ಸನ್ಮಾನಿಸ ಲಾಯಿತು. ಉದ್ಯಮಿ ರಮೇಶ್ ಕಾಂಚನ್, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಹರಿಪ್ರಸಾದ್ ರೈ, ದಿನೇಶ್ ಕಿಣಿ, ಲಯನ್ಸ್ ಜಿಲ್ಲಾ ಗವರ್ನರ್ ಮುಹಮ್ಮದ್ ಹನೀಫ್, ಗಿರೀಶ್ ರಾವ್, ನಿರ್ಮಾಪಕ ಆನಂದ್ ಕುಂಪಲ, ಸಹ ನಿರ್ಮಾಪಕರಾದ ಗಣೇಶ್ ಕೊಲ್ಯ, ಭರತ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಪವನ್ ಕುಮಾರ್ ಹಾಗೂ ಅಶೋಕ್ ಹೆಗ್ಡೆ, ಕಿಶೋರ್ ಡಿ.ಶೆಟ್ಟಿ, ಚಿತ್ತರಂಜನ್ ಬೋಳೂರು, ತಮ್ಮ ಲಕ್ಷ್ಮಣ್, ವಿಜಯ್ ಕೊಡವೂರು, ನಿತಿನ್ ಶೆಟ್ಟಿ, ನಟಿ ಸಮತಾ ಅಮೀನ್, ನಟ ವಿನೀತ್ ಕುಮಾರ್, ಭೊಜರಾಜ ವಾಮಂಜೂರು, ನಿರ್ದೇಶಕ ರಾಹುಲ್ ಅಮೀನ್, ಶ್ಯಾಮಿಲಿ, ಸಂದೀಪ್ ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಹರ್ಷಿತ್ ಸೋಮೇಶ್ವರ್, ರೋಷನ್, ದಯಾನಂದ ಬಂಟ್ವಾಳ, ರೂಪ ವರ್ಕಾಡಿ, ನವೀನ್ ಶೆಟ್ಟಿ, ಎಸ್‌ಕೆಪಿಎ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ ಉಪಸ್ಥಿತ ರಿದ್ದರು. ಮಧುರಾಜ್ ಕಾರ್ಯಕ್ರಮ ನಿರ್ವಹಿಸಿದರು.







