Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಾಲಿನ ಪ್ರೋತ್ಸಾಹಧನ ಕೂಡಲೇ ಬಿಡುಗಡೆ...

ಹಾಲಿನ ಪ್ರೋತ್ಸಾಹಧನ ಕೂಡಲೇ ಬಿಡುಗಡೆ ಮಾಡಬೇಕು: ಸಾಣೂರು ನರಸಿಂಹ ಕಾಮತ್

ವಾರ್ತಾಭಾರತಿವಾರ್ತಾಭಾರತಿ6 Feb 2024 3:06 PM IST
share
ಹಾಲಿನ ಪ್ರೋತ್ಸಾಹಧನ ಕೂಡಲೇ ಬಿಡುಗಡೆ ಮಾಡಬೇಕು: ಸಾಣೂರು ನರಸಿಂಹ ಕಾಮತ್
ಕಾರ್ಕಳ : ಕಳೆದ ಆಗಸ್ಟ್ ತಿಂಗಳಿನಿಂದ ರಾಜ್ಯ ಸರಕಾರವು ಹಾಲು ಉತ್ಪಾದಕ ಹೈನುಗಾರಿಗೆ, ಹಾಲಿನ ಪ್ರೋತ್ಸಾಹ ಧನ ಪಾವತಿ ಮಾಡಲು ಬಾಕಿಯಾಗಿದ್ದು, ಹೈನುಗಾರರು ತೀರ ಸಂಕಷ್ಟದಲ್ಲಿದ್ದಾರೆ. ಹೈನುಗಾರಿಕೆ ನಷ್ಟದ ಹಾದಿ‌ ಹಿಡಿಯುತ್ತಿದೆ ಎಂದು ಸಾಣೂರು ನರಸಿಂಹ ಕಾಮತ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ಎರಡು ವರ್ಷಗಳಿಂದ ಏರುತ್ತಿರುವ ಹಾಲು ಉತ್ಪಾದನಾ ಖರ್ಚು _ ವೆಚ್ಚಗಳಿಂದ ರಾಜ್ಯದ ಹೈನುಗಾರ ಕುಟುಂಬಗಳು ಹೈನುಗಾರಿಕೆಯಿಂದ ವಿಮುಖ ರಾಗುತ್ತಿದ್ದು, ಹಾಲಿನ ಉತ್ಪಾದನೆ ರಾಜ್ಯದ ಹಲವಾರು ಒಕ್ಕೂಟಗಳಲ್ಲಿ ಬೇಡಿಕೆಗಿಂತ ತುಂಬಾ* ಕಡಿಮೆಯಾಗಿದ್ದು, ಒಕ್ಕೂಟಗಳು ಮತ್ತು ಹೈನುಗಾರರು ನಷ್ಟವನ್ನು ಅನುಭವಿಸುತ್ತಿದ್ದಾರೆ. ನಂದಿನಿ ಪಶು ಆಹಾರದ ಬೆಲೆಯು ಆಗಾಗ ಏರಿಕೆಯಾಗುತ್ತಿದ್ದು, ಸರಕಾರವು ಪಶು ಆಹಾರಕ್ಕೆ ಕೆಜಿ ಒಂದಕ್ಕೆ ಕನಿಷ್ಠ ಐದು ರೂಪಾಯಿ ಸಬ್ಸಿಡಿ ನೀಡುವುದರ ಮೂಲಕ ನಿರಂತರ ಹೆಚ್ಚಳದ* ಹೊರೆಯನ್ನು ಇಳಿಸಿ ಹೈನುಗಾರರಿಗೆ ತುಸು ಸಾಂತ್ವನವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪಶು ವೈದ್ಯರ ಕೊರತೆ:
ರಾಜ್ಯದಲ್ಲಿ ಸರಕಾರಿ ಪಶುವೈದ್ಯರ ಸಾವಿರಾರು ಹುದ್ದೆಗಳು ಖಾಲಿ ಇದ್ದು ಕೂಡಲೇ ನೇಮಕಾತಿ ಮಾಡಿ ಹೈನುಗಾರಿಕಾ ಕ್ಷೇತ್ರಕ್ಕೆ ಬಲ ತುಂಬಬೇಕು. ಈ ವಿಚಾರವನ್ನು ಈಗಾಗಲೇ ರಾಜ್ಯ ಹಾಲು ಮಹಾ ಮಂಡಳಿ ಮತ್ತು ಜಿಲ್ಲಾ ಒಕ್ಕೂಟಗಳು , ಸಹಕಾರ ಭಾರತಿ ಸಂಘಟನೆ ರಾಜ್ಯ ಸರಕಾರದ ಗಮನಕ್ಕೆ ತಂದಿದ್ದರೂ, ರಾಜ್ಯ ಸರ್ಕಾರ ವು ರಾಜ್ಯದ ಹೈನುಗಾರಿಕಾ ಕ್ಷೇತ್ರಕ್ಕೆ ಅನುಕೂಲವಾಗುವ ಆರ್ಥಿಕ ಸಹಕಾರ ಹಾಗೂ ಪ್ರೋತ್ಸಾಹಕ ಯೋಜನೆಗಳನ್ನು ಅನುಷ್ಠಾನಕ್ಕೆ ತಾರದೆ ರಾಜ್ಯದ ಹೈನುಗಾರರು ತೀರಾ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.
ರಾಜ್ಯದಲ್ಲಿ ದಿನವಹಿ ರಾಜ್ಯ ಹಾಲು ಮಹಾ ಮಂಡಳಿಯ 15 ಹಾಲು ಒಕ್ಕೂಟ ವ್ಯಾಪ್ತಿಯ ಸರಿ ಸುಮಾರು 17 ಸಾವಿರಕ್ಕೂ ಮಿಕ್ಕಿ ಹಾಲು ಉತ್ಪಾದಕ ಸಹಕಾರಿ ಸಂಘಗಳ* ಮೂಲಕ, 10 ಲಕ್ಷಕ್ಕೂ ಮಿಕ್ಕಿ ಹೈನುಗಾರ ಕುಟುಂಬಗಳ ಪರಿಶ್ರಮದಿಂದ ಸರಾಸರಿ ಅಂದಾಜು 82 ಲಕ್ಷ ಲೀಟರ್ ಗಳಷ್ಟು ಹಾಲು ಸಂಗ್ರಹವಾಗುತ್ತಿದೆ. ಲೀಟರಿಗೆ 5/-ರೂಪಾಯಿಯಂತೆ ರಾಜ್ಯ ಸರಕಾರವು ಪ್ರೋತ್ಸಾಹ ಧನ ನೀಡುತ್ತಿದ್ದು, ಕಳೆದ ಐದು ತಿಂಗಳಿನಿಂದ ಹೈನುಗಾರರ ಖಾತೆಗಳಿಗೆ ಪ್ರೋತ್ಸಾಹ ಧನ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.
ಪ್ರೋತ್ಸಾಹ ಧನ ರೈತರ ಖಾತೆಗೆ ನಿಯಮಿತ ಪಾವತಿ:
ಕನಿಷ್ಠ ಎರಡು ತಿಂಗಳಿಗೊಮ್ಮೆಯಾದರೂ ರಾಜ್ಯ ಸರಕಾರವು ನಿಯಮಿತವಾಗಿ ಹೈನುಗಾರರ ಖಾತೆಗಳಿಗೆ ಪ್ರೋತ್ಸಾಹ ಧನವನ್ನು ಪಾವತಿಸಿದರೆ ಗ್ರಾಮೀಣ ಭಾಗದ ರೈತರು ಸ್ವಲ್ಪ ನಿಟ್ಟುಸಿರನ್ನು ಬಿಡಬಹುದು. ಈಗಾಗಲೇ ಬಾಕಿ ಉಳಿದಿರುವ ಹಾಲಿನ ಪ್ರೋತ್ಸಾಹ ಧನವನ್ನು ರಾಜ್ಯ ಸರಕಾರವು ಕೂಡಲೇ ರೈತರ ಖಾತೆಗಳಿಗೆ ಏಕಗಂಟಿನಲ್ಲಿಪಾವತಿ ಮಾಡಿ, ಹೈನುಗಾರರಲ್ಲಿ ಜೀವನೋತ್ಸಾಹ ತುಂಬಬೇಕು ಎಂದು ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸಾಣೂರು ನರಸಿಂಹ ಕಾಮತ್ ರವರು ಪತ್ರಿಕಾ ಪ್ರಕಟಣೆಯ ಮೂಲಕ ರಾಜ್ಯದ ಸಹಕಾರಿ ಸಚಿವರು ,ಪಶು ಸಂಗೋಪನ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಒತ್ತಯಿಸಿದ್ದಾರೆ.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X