Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 2015ರ ನಂತರದ ಒತ್ತುವರಿ ತೆರವಿಗೆ ಸಚಿವ...

2015ರ ನಂತರದ ಒತ್ತುವರಿ ತೆರವಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ25 May 2026 8:49 PM IST
share
2015ರ ನಂತರದ ಒತ್ತುವರಿ ತೆರವಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಉಡುಪಿ, ಮೇ 25: ರಾಜ್ಯ ಸರಕಾರ ಅರಣ್ಯ ಭೂಮಿ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ಹೊಂದಿದ್ದು, ಹೊಸ ಒತ್ತುವರಿಗೆ ಅವಕಾಶ ನೀಡಲೇಬಾರದು ಮತ್ತು 2015ರ ನಂತರದ ಎಲ್ಲ ಒತ್ತುವರಿ ತೆರವು ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಉಡುಪಿಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಸಚಿವರು, 2015ಕ್ಕೆ ಮೊದಲು ರಾಜ್ಯದಲ್ಲಿ ಒಟ್ಟು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ ಆಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಲಾಗಿದೆ. ಇದರಲ್ಲಿ ಜೀವನೋಪಾಯಕ್ಕಾಗಿ ಒತ್ತುವರಿ ಮಾಡಿರುವ ಅಂದರೆ ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿರುವ ಕುಟುಂಬಗಳಿಗೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡುವ ತನಕ ತೆರವು ಮಾಡದಂತೆ ನಿರ್ಣಯಿಸಿದೆ. 3 ಎಕರೆಗಿಂತ ಹೆಚ್ಚಿನ ಒತ್ತುವರಿಯನ್ನು ತೆರವು ಮಾಡಲು ಕ್ರಮ ಕೈಗೊಳ್ಳಿ ಎಂದು ಅವರು ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.

ವ್ಯವಸ್ಥಾಪನಾಧಿಕಾರಿ ನೇಮಕ: ಸೆಕ್ಷನ್ 4 ಪ್ರಕ್ರಿಯೆ ನಡೆದು, ಸೆಕ್ಷನ್ 17 ಮಾಡಿರುವ ಸುಮಾರು 2000 ಎಕರೆ ಪ್ರದೇಶವನ್ನು ಕೂಡಲೇ ಅಧಿಸೂಚಿತ ಅರಣ್ಯ ಎಂದು ದಾಖಲಿಸಲು ಕ್ರಮಕೈಗೊಳ್ಳುವಂತೆ ಅರಣ್ಯ ಸಚಿವರು ಸೂಚಿಸಿದರು.

ಉಡುಪಿಯಲ್ಲಿಂದು ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಅರಣ್ಯ ಹಾಗೂ ಪರಿಸರ ಇಲಾಖೆ ಅಧಿಕಾರಿಗಳು ಮತ್ತು ಉಡುಪಿ ಜಿಲ್ಲಾಧಿಕಾರಿ ಗಳೊಂದಿಗೆ ಸಭೆ ನಡೆಸಿದ ಅವರು, ಮಂಗಳೂರು ವೃತ್ತದಲ್ಲಿ 6144.99 ಹೆಕ್ಟೆರ್ ಪ್ರದೇಶಕ್ಕೆ ಸಂಬಂಧಿಸಿದ 55 ಪ್ರಕರಣಗಳು ಸೆಕ್ಷನ್ 17 ಅಂದರೆ ಅಧಿಸೂಚಿತ ಅರಣ್ಯ ಎಂದು ಘೋಷಿಸಲು ಬಾಕಿ ಇದ್ದು, ಈ ಪ್ರಕ್ರಿಯೆ ಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ವ್ಯವಸ್ಥಾಪನಾಧಿಕಾರಿ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದರು.

ಉಡುಪಿ ಜಿಲ್ಲೆಯಲ್ಲಿ 1224 ಸರ್ವೆ ನಂಬರ್‌ಗಳಲ್ಲಿ ಪರಿಭಾವಿತ (ಡೀಮ್ಡ್) ಅರಣ್ಯವಿದ್ದು, ಇದರಲ್ಲಿ ಸಂಪೂರ್ಣ ಡೀಮ್ಡ್ ಇರುವ 400 ಸರ್ವೆ ನಂಬರ್‌ಗಳಿವೆ. ಉಳಿದ 800 ಸರ್ವೆ ನಂಬರ್‌ಗಳ ಪೈಕಿ 94 ಸರ್ವೆ ನಂಬರ್‌ಗಳ ಜಂಟಿ ಸರ್ವೆ ಮಾಡಲಾಗಿದೆ ಎಂದು ಸಭೆಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಕೂಡಲೇ ಹೆಚ್ಚುವರಿ ಮೋಜಿಣಿದಾರರನ್ನು ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ನಿಯೋಜಿಸಿ ಉಳಿದ ಸರ್ವೆ ನಂಬರ್‌ಗಳ ಸರ್ವೆ ಕಾರ್ಯ ವನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಕೆ.ಎಂ.ಎಲ್.ನಲ್ಲಿ ಅಳವಡಿಸುವಂತೆ ಅರಣ್ಯ ಸಚಿವರು ಸೂಚಿಸಿದರು.

ಫಿಷ್ ಮಿಲ್‌ಗಳ ವಿರುದ್ಧ ಕ್ರಮಕ್ಕೆ ಸೂಚನೆ: ಮಾಲಿನ್ಯಕಾರಕವಾದ ಫಿಷ್ ಮಿಲ್‌ಗಳ ವಿರುದ್ಧ ಕ್ರಮ ವಹಿಸಲು ಸೂಚಿ ಸಿದ ಅರಣ್ಯ ಸಚಿವರು, ನದಿಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಿ, ಶುದ್ಧೀಕರಣ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬ ಬಗ್ಗೆ ನಿಗಾ ಇಡುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ತ್ರಿಪಾಠಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್ ಮತ್ತು ಕಮಲಾ ಕರಿಕಳನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತ ರಿದ್ದರು.

ವನ್ಯಜೀವಿ- ಮಾನವ ಸಂಘರ್ಷ ತಡೆಗೆ ಸೂಚನೆ

ಕರಾವಳಿ ಭಾಗದ ಪುತ್ತೂರು, ಹೆಬ್ರಿ, ಸುಳ್ಯ, ಉಪ್ಪಿನಂಗಡಿ, ಬೆಳ್ತಂಗಡಿ, ವೇಣೂರು, ಕಾರ್ಕಳ ಮೊದಲಾದ ಕಡೆಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದ ಪ್ರಕರಣಗಳು ನಡೆಯುತ್ತಿದ್ದು, ಇದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಇದೇ ವೇಳೆ ಶಂಕರನಾರಾಯಣ ವಲಯ ಹೆನ್ನಬಯಲು ಸೆಕ್ಷನ್‌ನಲ್ಲಿ ಚಿರತೆಯೊಂದನ್ನು ಕೊಂದು ಅದರ ಕಾಲುಗಳನ್ನು ಕತ್ತರಿಸಿಕೊಂಡು ಹೋಗಿದ್ದ ದುಷ್ಕರ್ಮಿಗಳನ್ನು ಹುಡುಕಿ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ಅಧಿಕಾರಿ ಸಿಬ್ಬಂದಿಯ ಸೇವೆಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X