ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ಜಿಲ್ಲಾಧಿಕಾರಿಗೆ ಮನವಿ

ಉಡುಪಿ, ಆ.8: ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದೇವಾಲಯ ಹಾಗೂ ಅಲ್ಲಿನ ಧಾರ್ಮಿಕ ನಂಬಿಕೆಯುಳ್ಳ ಪುಣ್ಯಕ್ಷೇತ್ರದ ಮೇಲೆ ಕಳಂಕ ತರುವ ನಿಟ್ಟಿನಲ್ಲಿ ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಸೇರಿದಂತೆ ಹಲವರು ಅನಾಮಿಕ ವ್ಯಕ್ತಿಯನ್ನು ಬಳಸಿಕೊಂಡು ಒಳಸಂಚು ನಡೆಸಿದ್ದು, ಇದರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಜಿಲ್ಲೆಯ ಶ್ರೀಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಬಳಗದ ಸದಸ್ಯರು, ಇವರೆಲ್ಲರೂ ಅನಾಮಿಕ ವ್ಯಕ್ತಿಯೊಬ್ಬನನ್ನು ಬಳಸಿಕೊಂಡು ಧರ್ಮಸ್ಥಳ ದೇವಸ್ಥಾನ ಹಾಗೂ ಹೆಗ್ಗಡೆ ಕುಟುಂಬದ ವಿರುದ್ಧ ವ್ಯಾಪಕ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕೊಡ್ಗಿ, ಮಾಜಿ ಶಾಸಕ ಕೆ.ರಘುಪತಿ ಭಟ್, ಮುಖಂಡರಾದ ಮಹೇಶ್ ಠಾಕೂರ್, ಸುಪ್ರಸಾದ್ ಶೆಟ್ಟಿ ಬೈಕಾಡಿ, ನವೀನ್ ಶೆಟ್ಟಿ ಕುತ್ಯಾರು, ಬಾರಕೂರು ಶಾಂತರಾಮ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ವಸಂತ ಗಿಳಿಯಾರು, ಶರತ್ ಶೆಟ್ಟಿ ವಡ್ಡರ್ಸೆ ಮತ್ತಿತರರು ಉಪಸ್ಥಿತರಿದ್ದರು.





