Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣ್ಣಪಳ್ಳ ಕೆರೆ ನಿರ್ವಹಣೆ ನಗರಸಭೆಗೆ...

ಮಣ್ಣಪಳ್ಳ ಕೆರೆ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಲು ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Nov 2025 7:36 PM IST
share
ಮಣ್ಣಪಳ್ಳ ಕೆರೆ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಲು ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ, ನ.12: ಉಡುಪಿ ನಗರಸಭಾ ವ್ಯಾಪ್ತಿಯ ಮಣ್ಣಪಳ್ಳ ಕೆರೆ ಸಮರ್ಪಕ ನಿರ್ವಹಣೆ ಇಲ್ಲದೆ ಸಮಸ್ಯೆಗಳ ಗೂಡಾಗಿದ್ದು, ಈಗಾಗಲೇ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಣ್ಣಪಳ್ಳ ಕೆರೆಯನ್ನು ನಗರಸಭೆಗೆ ಹಸ್ತಾಂತರಿಸುವಂತೆ ನಿರ್ಣಯ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದು, ಜಿಲ್ಲಾಡಳಿತ ತಕ್ಷಣ ಮಣ್ಣಪಳ್ಳ ಕೆರೆಯನ್ನು ನಗರಸಭೆಗೆ ಹಸ್ತಾಂತರಿಸಲು ಕ್ರಮ ವಹಿಸಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಮಣ್ಣಪಳ್ಳ ನಗರ ಭಾಗದ ಅತ್ಯಂತ ವಿಶಾಲವಾದ ಏಕೈಕ ಕೆರೆಯಾಗಿದ್ದು, ಪ್ರತಿದಿನ ನೂರಾರು ಮಂದಿ ವಾಯು ವಿಹಾರಕ್ಕೆ ಆಗಮಿಸುತ್ತಿದ್ದು, ಶುಚಿತ್ವ, ದಾರಿದೀಪ, ಕಳೆ ಗಿಡಗಳು ಹಾಗೂ ಭದ್ರತಾ ವ್ಯವಸ್ಥೆ ಕೊರತೆಯಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲಾಡಳಿತದ ಸುಪರ್ದಿಯಲ್ಲಿರುವ ಮಣ್ಣಪಳ್ಳ ಕೆರೆ ಸೂಕ್ತ ನಿರ್ವಹಣೆಯಿಲ್ಲದೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಣ್ಣಪಳ್ಳ ಕೆರೆ ಹಸ್ತಾಂತರಿಸುವಂತೆ ಕಳೆದ ವರ್ಷವೇ ಪತ್ರ ಬರೆದು ಮನವಿ ಮಾಡಿದರೂ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮಣ್ಣಪಳ್ಳ ಕೆರೆಯ ಹೂಳೆತ್ತಿ, ಸ್ವಚ್ಛಗೊಳಿಸಿದ್ದಲ್ಲಿ ಜಲ ವಿಹಾರ/ಕ್ರೀಡೆಗಳಿಗೆ ಅನುಕೂಲ ಆಗಲಿದೆ. ಕೆರೆಯ ಪಾರ್ಶ್ವದಲ್ಲಿ ಕಂಬಳ ಕ್ರೀಡೆಯನ್ನು ಪುನರ್‌ ಪ್ರಾರಂಭಿಸಲು ಅವಕಾಶ ಕಲ್ಪಿಸುವಂತೆ ಬೇಡಿಕೆಯಿದೆ. ಕೆರೆಯ ಸುತ್ತಲೂ ಸುಸಜ್ಜಿತ ವಾಕಿಂಗ್ ಟ್ರ್ಯಾಕ್, ಸೈಕ್ಲಿಂಗ್ ಟ್ರ್ಯಾಕ್, ನಿರ್ಮಿಸಿ ನಾಗರಿಕರಿಗೆ ಉತ್ತಮ ಸೌಲಭ್ಯ ಒದಗಿಸಬೇಕಾಗಿದೆ. ಬಯಲು ರಂಗಮದಿರ, ಕ್ರೀಡಾ ಕಟ್ಟಡ, ಶೌಚಾಲಯಗಳ ನಿರ್ಮಾಣ ಮತ್ತು ಸಮರ್ಪಕ ನಿರ್ವಹಣೆ ಆಗಬೇಕಾಗಿದೆ. ಬೇಸಿಗೆಯಲ್ಲಿ ಸ್ವರ್ಣ ನದಿಯಿಂದ ಪಂಪಿಂಗ್ ಮೂಲಕ ನೀರನ್ನು ಪೂರೈಸಿ, ಅಂತರ್ಜಲ ಹೆಚ್ಚಿಸುವ ಅವಕಾಶ ಇದೆ.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಣ್ಣಪಳ್ಳ ಕೆರೆಯೂ ಸೇರಿದಂತೆ ಕೆರೆಗಳ ನಿರ್ವಹಣೆಗೆ ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಮಣ್ಣಪಳ್ಳ ಕೆರೆಯನ್ನು ಉಡುಪಿ ನಗರಸಭೆಗೆ ಹಸ್ತಾಂತರಿಸಿಕೊಂಡು ನಗರಸಭೆ, ರಾಜ್ಯ ಸರಕಾರ, ಕೇಂದ್ರ ಸರಕಾರ ಹಾಗೂ ಮತ್ತಿತರ ಅನುದಾನಗಳನ್ನು ಒಗ್ಗೂಡಿಸಿಕೊಂಡು ಕೆರೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ವಿಫುಲ ಅವಕಾಶ ಇದ್ದು, ನಗರಸಭೆಗೆ ಮಣ್ಣಪಳ್ಳ ಕೆರೆಯನ್ನು ಹಸ್ತಾಂತರಿಸಿದಲ್ಲಿ ಸಮಗ್ರ ಮತ್ತು ಜನ ಸ್ನೇಹಿ ಅಭಿವೃದ್ಧಿ ಮತ್ತು ನಿರ್ವಹಣೆ ಸಾಧ್ಯವಾಗಲಿದ್ದು, ಈ ಬಗ್ಗೆ ಶೀಘ್ರ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X