Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಂಗಾರು ಮಳೆ| ಇದುವರೆಗೆ 183 ಕೋಟಿ ರೂ....

ಮುಂಗಾರು ಮಳೆ| ಇದುವರೆಗೆ 183 ಕೋಟಿ ರೂ. ನಷ್ಟದ ಅಂದಾಜು: ಅಪರ ಜಿಲ್ಲಾಧಿಕಾರಿ ಮಮತಾದೇವಿ

ವಾರ್ತಾಭಾರತಿವಾರ್ತಾಭಾರತಿ13 Aug 2024 8:01 PM IST
share
ಮುಂಗಾರು ಮಳೆ| ಇದುವರೆಗೆ 183 ಕೋಟಿ ರೂ. ನಷ್ಟದ ಅಂದಾಜು: ಅಪರ ಜಿಲ್ಲಾಧಿಕಾರಿ ಮಮತಾದೇವಿ

ಉಡುಪಿ: ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ.41ರಷ್ಟು ಸುರಿದ ಅಧಿಕ ಮುಂಗಾರು ಮಳೆ ಯಿಂದಾಗಿ ಜಿಲ್ಲೆಯ ರಸ್ತೆ, ಮೇಲ್ಸೇತುವೆ, ವಿದ್ಯುತ್‌ಚ್ಛಕ್ತಿ ಕಂಬ, ಟ್ರಾನ್ಸ್‌ಫಾರ್ಮರ್ ಹಾಗೂ ಲೈನ್‌ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಉಂಟಾಗಿರುವ ವಿವಿಧ ಹಾನಿಗಳಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ ಸುಮಾರು 183 ಕೋಟಿ ರೂ. ಗಳಷ್ಟು ನಷ್ಟದ ಅಂದಾಜು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮಳೆಯಿಂದಾಗಿ ಈಗಾಗಲೇ ಹಾನಿಗೊಂಡಿರುವ ಮೂಲ ಸೌಕರ್ಯಗಳು, ವಿವಿಧ ಸೊತ್ತುಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು ಶೀಘ್ರದಲ್ಲೇ ಅವು ಗಳನ್ನು ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟುಕೊಡಬೇಕು ಎಂದರು.

ಮಳೆಗಾಲದಲ್ಲಿ ಸಂಭವಿಸುವ ಭೂಕುಸಿತಗಳಿಂದಾಗುವ ಅಪಾಯಗಳನ್ನು ತಪ್ಪಿಸಿ, ಜನ ಹಾಗೂ ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಮುನ್ನಚ್ಚರಿಕೆ ವಹಿಸುವ ಉದ್ದೇಶದಿಂದ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ನಿಖರವಾಗಿ ಗುರುತಿಸಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಪ್ರತಿನಿತ್ಯ ಅಂತಹ ಪ್ರದೇಶಗಳ ಸ್ಥಳಗಳನ್ನು ಪರಿಶೀಲಿಸಬೇಕು. ಭೂಕುಸಿತ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಳೆದ ನಾಲ್ಕೈದು ದಿನಗಳಿಂದ ಕಡಿಮೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಮಳೆಯ ನೀರು ಕೆಲ ವಸ್ತುಗಳಲ್ಲಿ ಸಂಗ್ರಹವಾಗಿ ಸೊಳ್ಳೆಗಳ ಉತ್ಪತ್ತಿ ತಾಣವಾಗುತ್ತಿವೆ. ಇದರಿಂದಾಗಿ ಡೆಂಗಿ ರೋಗ ಮತ್ತೆ ಉಲ್ಬಣ ಗೊಳ್ಳುವ ಸಾಧ್ಯತೆಗಳಿವೆ. ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಡೆಂಗಿ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ನೀರಿನಲ್ಲಿ ಯಾವುದೇ ರೀತಿಯ ತೈಲ ಹಾಗೂ ರಾಸಾಯನಿಕ ಸೋರಿಕೆಯ ಅನಿಶ್ಚಿತತೆಗೆ ಪ್ರತಿಕ್ರಿಯಿಸಲು ಸಾಮೂಹಿಕ ಸನ್ನದ್ದತೆ ಅವಶ್ಯವಿದ್ದು, ಇವುಗಳ ನಿರ್ವಹಣೆಗೆ ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ತೈಲ ಸೋರಿಕೆ ವಿಪತ್ತು ನಿರ್ವ ಹಣಾ ಸಮಿತಿಯನ್ನು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿದೆ. ಸಮುದ್ರ ಸೇರಿದಂತೆ ಜಿಲ್ಲೆಯ ಯಾವುದೇ ಭಾಗದ ನೀರಿನಲ್ಲಿ ತೈಲ ಅಥವಾ ರಾಸಾಯನಿಕ ಸೋರಿಕೆಯಾಗಿ ಪರಿಸರ ಮಾಲಿನ್ಯ ಸಂರಕ್ಷಿಸಲು ಹಾಗೂ ಅಪಾಯವನ್ನು ಕಡಿಮೆಮಾಡಲು ಸಮಿತಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಡೆಂಗಿ ಪ್ರಕರಣಗಳು ಹೆಚ್ಚು ಇರುವ ಪ್ರದೇಶ ವ್ಯಾಪ್ತಿಯಲ್ಲಿ ಸಾರ್ವಜನಿಕ ರಿಗೆ ಅರಿವು ಮೂಡಿಸಲು ಜಿಂಗಲ್ಸ್, ಎಸ್.ಎಲ್.ಆರ್.ಎಮ್ ವಾಹನಗಳ ಮೂಲಕ ರೋಗ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಮಾಹಿತಿಗಳನ್ನು ಪ್ರಚಾರ ಪಡಿಸಬೇಕು ಎಂದ ಮಮತಾದೇವಿ, ಸಣ್ಣ ಗೂಡಂಗಡಿಗಳಲ್ಲಿ ಎಳನೀರು ಬೊಂಡ, ಟೀಕಪ್ ಮುಂತಾದವುಗಳ ಸೂಕ್ತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ ಖಾತೆಯಲ್ಲಿ 16.93 ಕೋಟಿ ರೂ.ನಷ್ಟು ಅನುದಾನ ಲಭ್ಯವಿದೆ. ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ 2.61 ಕೋಟಿ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದರು.

ಸಭೆಯಲ್ಲಿ ಸಹಾಯಕ ಕಮಿಷನರ್ ಮಹೇಶ್ಚಂದ್ರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ನಾಯಕ್, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು ಮತ್ತಿತರರು ಉಪಸ್ಥಿತರಿದ್ದರು.

Tags

Monsoon
share
ವಾರ್ತಾಭಾರತಿ
ವಾರ್ತಾಭಾರತಿ
Next Story
X