Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಂಗಾರು ಮಳೆ| ಉಡುಪಿ ಜಿಲ್ಲೆಯಲ್ಲಿ 287...

ಮುಂಗಾರು ಮಳೆ| ಉಡುಪಿ ಜಿಲ್ಲೆಯಲ್ಲಿ 287 ಕೋಟಿ ರೂ. ಅಂದಾಜು ಹಾನಿ

ಪುನರ್‌ ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕರೆ

ವಾರ್ತಾಭಾರತಿವಾರ್ತಾಭಾರತಿ25 Oct 2024 7:26 PM IST
share
ಮುಂಗಾರು ಮಳೆ| ಉಡುಪಿ ಜಿಲ್ಲೆಯಲ್ಲಿ 287 ಕೋಟಿ ರೂ. ಅಂದಾಜು ಹಾನಿ

ಉಡುಪಿ, ಅ.25: ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಜೂನ್‌ನಿಂದ ಸೆಪ್ಟಂಬರ್‌ವರೆಗಿನ ಅವಧಿಯಲ್ಲಿ ಸುರಿದ ಮುಂಗಾರು ಮಳೆ ಯಿಂದ ಒಟ್ಟು ಸುಮಾರು 28721.21 ಲಕ್ಷ ರೂ.(287.21ಕೋಟಿ ರೂ.) ಅಂದಾಜು ಹಾನಿ ಸಂಭವಿಸಿದ್ದು, ಇವುಗಳ ಪುನರ್‌ ನಿರ್ಮಾಣ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಈವರೆಗೆ ವಾಡಿಕೆಗಿಂತ ಶೇ. 15ರಷ್ಟು ಹೆಚ್ಚು ಮಳೆ ಬಿದ್ದಿದೆ. ಇದರಿಂದ ರಸ್ತೆ, ಸೇತುವೆ, ವಿದ್ಯುತ್ ಸರಬರಾಜು ಕಂಬ, ಟ್ರಾನ್ಸ್‌ಫಾರ್ಮರ್ ಹಾಗೂ ವಿದ್ಯುತ್ ಲೈನ್‌ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಪ್ರಾಥಮಿಕ/ ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಆಗಿರುವ ಹಾನಿಯನ್ನು 287.21 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. ಹೀಗೆ ಆಗಿರುವ ಹಾನಿಗಳ ಪುನರ್ ನಿರ್ಮಾಣ ಕಾಮಗಾರಿಗೆ ವಿಶೇಷ ಆದ್ಯತೆ ನೀಡುವಂತೆ ಅವರು ಸೂಚಿಸಿದರು.

ಅದರಲ್ಲೂ ವಿವಿಧ ಮೂಲಸೌಕರ್ಯಗಳಿಗೆ ಆಗಿರುವ ಹಾನಿಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ತ್ವರಿತಗತಿಯಲ್ಲಿ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಯಾವುದೇ ಇಲಾಖೆ ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವಹಾನಿಗೆ ಸಂಬಂಧಿಸಿ ದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆಗಳ ತುರ್ತು ದುರಸ್ಥಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನವೆಂಬರ್ ಅಂತ್ಯದ ಒಳಗೆ ಕಾಮಗಾರಿಗಳನ್ನು ಪೂರ್ಣ ಗೊಳಿಸಬೇಕು ಎಂದ ಅವರು, ಶಾಲಾ ಕಟ್ಟಡ, ಅಂಗನವಾಡಿಗಳ ತುರ್ತು ದುರಸ್ಥಿ ಕಾಮಗಾರಿಗೆ ಅನುದಾನದ ಅಗತ್ಯವಿದ್ದಲ್ಲಿ ಕೂಡಲೆ ತಮಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಅರಬಿ ಸಮುದ್ರದಲ್ಲಿ ಚಂಡಮಾರುತದ ಪರಿಣಾಮದಿಂದ ಈ ತಿಂಗಳ ಅಂತ್ಯದವರೆಗೂ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಹಿಂಗಾರು ಮಳೆಯ ಸಂದರ್ಭದಲ್ಲಿ ಆಸ್ತಿ-ಪಾಸ್ತಿಗೆ ಹಾನಿಯಾಗದಂತೆ, ಮನೆಹಾನಿ ಆದ ಸಂದರ್ಭದಲ್ಲಿ ಅವರುಗಳನ್ನು ಕಾಳಜಿ ಕೇಂದ್ರ ಅಥವಾ ಇತರೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಅನುಕೂಲವಾಗುವಂತೆ ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿರುವುದರ ಜೊತೆಗೆ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆಗಳನ್ನು ನೀಡಿದರು.

ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಸರ್ವೇ ಕಾರ್ಯದಲ್ಲಿ ಯಾವುದೇ ಫಲಾನುಭವಿಯ ಹೆಸರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಇಲಾಖೆ ಗಳಿಗೆ ಬಿಡುಗಡೆಯಾಗುವ ಅನುದಾನದಲ್ಲಿ ಮೂಲಭೂತ ಸೌಲಭ್ಯಗಳ ದುರಸ್ಥಿಗೆ ಸಂಬಂಧಿ ಸಿದಂತೆ ವಿಶೇಷ ಪ್ರಸ್ತಾವನೆಗಳನ್ನು ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸಿ, ಬಂದ ಅನುದಾನದಲ್ಲಿ ಮೂಲಭೂತ ಸೌಕರ್ಯಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಗಮನಹರಿಸಬೇಕು ಎಂದರು.

ಭೂಕುಸಿತಗಳಿಂದಾಗುವ ಅಪಾಯಗಳನ್ನು ತಪ್ಪಿಸಿ, ಜನ ಹಾಗೂ ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಸರಕಾರಕ್ಕೆ ಪ್ರಸ್ತಾವನೆ ಯನ್ನು ಸಲ್ಲಿಸಲಾಗಿದೆ ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ ಖಾತೆಯಲ್ಲಿ 11.39 ಕೋಟಿ ರೂ. ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ 165.70 ಲಕ್ಷ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಸಂಬಂಧಪಟ್ಟಂತೆ ಅನುದಾನದಲ್ಲಿ ಯಾವುದೇ ಕೊರತೆ ಇರುವುದಿಲ್ಲ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಕುಂದಾಪುರ ಸಹಾಯಕ ಕಮಿಷನರ್ ಮಹೇಶ್ಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

"ಸದ್ಯ ಮಳೆ ನಿಂತಿರುವ ಹಿನ್ನೆಲೆಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕಲುಷಿತ ನೀರು ಶುದ್ಧ ಕುಡಿಯುವ ನೀರಿಗೆ ಸೇರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು. ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸಿ, ಕುಡಿಯಲು ಯೋಗ್ಯ ವಾಗಿದ್ದಲ್ಲಿ ಮಾತ್ರ ಸೇವನೆಗೆ ಅವಕಾಶ ನೀಡಬೇಕು. ಕಲುಷಿತ ನೀರಿನ ಸೇವನೆ ಯಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಮರಣ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಬಾವಿ ಹಾಗೂ ನದಿ ನೀರಿಗೆ ಕೊಳಚೆ ನೀರು ಸೇರದಂತೆ ಸೂಕ್ತ ಕ್ರಮಕೈಗೊಳ್ಳಬೇಕು. ಸಾರ್ವಜನಿಕ ಹಾಗೂ ಸರಕಾರಿ ಬಾವಿಗಳನ್ನು ಸ್ವಚ್ಛಗೊಳಿಸಲು ತಕ್ಷಣವೇ ಮುಂದಾಗಬೇಕು".

-ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ

ಚರಂಡಿ, ಕಾಲುವೆ ಸ್ವಚ್ಛಗೊಳಿಸಿ: ಇದೀಗ ಮಳೆ ನಿಂತಿರುವ ಕಾರಣ ಚರಂಡಿಯಲ್ಲಿ, ಕಾಲುವೆಗಳಲ್ಲಿ, ತೋಡುಗಳಲ್ಲಿ ಸಿಲುಕಿರುವ ಕಸ, ಕಡ್ಡಿ, ತರಗೆಲೆಗಳನ್ನು ತೆರವುಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದರು.

ಜಿಲ್ಲೆಯಲ್ಲಿ ಈ ಬಾರಿ ಹೆಚ್ಚು ಮಳೆಯಾಗಿರುವ ಕಾರಣ ಎಲ್ಲಾ ಅಣೆಕಟ್ಟುಗಳ ಗುಣಮಟ್ಟವನ್ನು ಆಗಿಂದಾಗ್ಗೆ ಪರಿಶೀಲಿಸಿ, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.





Tags

Monsoon
share
ವಾರ್ತಾಭಾರತಿ
ವಾರ್ತಾಭಾರತಿ
Next Story
X