Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೊಂತಿ ಫೆಸ್ತ್: ತೊಟ್ಟಂ ಚರ್ಚಿನಲ್ಲಿ...

ಮೊಂತಿ ಫೆಸ್ತ್: ತೊಟ್ಟಂ ಚರ್ಚಿನಲ್ಲಿ ಸಾವಯವ ತರಕಾರಿ ಸಂತೆ

ವಾರ್ತಾಭಾರತಿವಾರ್ತಾಭಾರತಿ6 Sept 2024 6:23 PM IST
share
ಮೊಂತಿ ಫೆಸ್ತ್: ತೊಟ್ಟಂ ಚರ್ಚಿನಲ್ಲಿ ಸಾವಯವ ತರಕಾರಿ ಸಂತೆ

ಮಲ್ಪೆ: ಮಲ್ಪೆ ಸಮೀಪದ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಮೊಂತಿ ಫೆಸ್ತ್ ಸಂದರ್ಭದಲ್ಲಿ ಕೃಷಿಕರು ತಮ್ಮ ತೋಟದಲ್ಲಿ ತಾವೇ ಬೆಳೆದ ತರಕಾರಿಗಳನ್ನು ನೇರವಾಗಿ ತಂದು ಮಾರಾಟ ಮಾಡುವ ನಿಟ್ಟಿನಲ್ಲಿ ತರಕಾರಿ ಸಂತೆ ಎಂಬ ಹೆಸರಿನಲ್ಲಿ ಸೆ.6 ಮತ್ತು 7ರಂದು ಎರಡು ದಿನಗಳ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಗಣೇಶ ಚತುರ್ಥಿ, ಕ್ರೈಸ್ತರ ಮೊಂತಿ ಫೆಸ್ತ್, ಈದ್ ಮಿಲಾದ್ ಹಬ್ಬಗಳು ಸಾಲು ಸಾಲಾಗಿ ಬಂದಿದ್ದು, ಗಣೇಶ ಚತುರ್ಥಿ ಹಾಗೂ ಮೊಂತಿಫೆಸ್ತ್ ಹಬ್ಬಕ್ಕೆ ತರಕಾರಿ ಖಾದ್ಯಗಳಿಗೆ ಬೇಡಿಕೆ ಹೆಚ್ಚು. ಈ ನಿಟ್ಟಿನಲ್ಲಿ ಸ್ಥಳೀಯ ಕೃಷಿಕರಿಗೆ ಹೆಚ್ಚಿನ ಸಹಾಯವಾಗಲೆಂಬ ನಿಟ್ಟಿನಲ್ಲಿ ತರಕಾರಿ ಸಂತೆಯನ್ನು ಮಾಡಲಾಗಿದೆ. ಇಲ್ಲಿ ಯಾವುದೇ ಮಧ್ಯವರ್ತಿಗಳು, ದಲ್ಲಾಳಿಗಳ ಕಿರಿಕಿರಿ ಇಲ್ಲದೆ ನೇರವಾಗಿ ರೈತರು ತಮ್ಮ ತೋಟದಲ್ಲಿ ಬೆಳೆದ ತರಕಾರಿಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ.

ತೊಟ್ಟಂ, ತೆಂಕನಿಡಿಯೂರು, ಬಡಾನಿಡಿಯೂರು, ಮಲ್ಪೆ ಭಾಗದ ಹಲವಾರು ರೈತರು ತಮ್ಮ ತೋಟದಲ್ಲಿ ಸಾವಯವ ಗೊಬ್ಬರಗಳನ್ನು ಹಾಕಿ ಬೆಳೆಸಿದೆ ಬೆಂಡೆಕಾಯಿ, ಹೀರೆ, ಹರಿವೆ, ಅಲಸಂಡೆ, ಬಸಳೆ ಹಾಗೂ ಇತರ ತರಕಾರಿಗಳನ್ನು ಕೊಯ್ದು ತಂದು ಮಾರಾಟಕ್ಕೆ ಇಟ್ಟಿದ್ದು ತೊಟ್ಟಂ ಚರ್ಚ್ ವ್ಯಾಪ್ತಿಯಲ್ಲದೆ ಪಕ್ಕದ ಚರ್ಚುಗಳ ಸದಸ್ಯರೂ ಕೂಡ ಶುದ್ದ ಸಾವಯವ ತರಕಾರಿಗಳನ್ನು ಖರೀದಿಸಿದರು.

ತೊಟ್ಟಂ ದೇವಾಲಯದ ಕಥೊಲಿಕ್ ಸಭಾ ಸಂಘಟನೆ ಈ ವಿಶಿಷ್ಟ ಪ್ರಯತ್ನಕ್ಕೆ ಮಾಡಿದ್ದು, ಇದಕ್ಕೆ ಸ್ಥಳೀಯ ಸರ್ವಧರ್ಮ ಸಮನ್ವಯ ಸಮಿತಿ ಕೂಡ ಕೈ ಜೋಡಿಸಿದೆ. ಇಲ್ಲಿ ನೇರವಾಗಿ ರೈತರಿಂದ ಗ್ರಾಹಕರಿಗೆ ಅತೀ ಕಡಿಮೆ ಬೆಲೆಯಲ್ಲಿ ತರಕಾರಿ ಲಭಿಸುತ್ತಿದ್ದು ಕೇವಲ ನಗದು ವ್ಯವಹಾರಕ್ಕೆ ಅವಕಾಶವಿದ್ದು ಯಾವುದೇ ಡಿಜಿಟಲ್ ಪೇಮೆಂಟ್ ವ್ಯವಸ್ಥೆಗೆ ಅವಕಾಶ ನೀಡಿಲ್ಲ. ಅಲ್ಲದೆ ತರಕಾರಿಗಳನ್ನು ಕೊಂಡಯ್ಯಲು ಬರುವಾಗ ಕಡ್ಡಾಯವಾಗಿ ಪರಿಸರ ಸ್ನೇಹಿ ಚೀಲಗಳನ್ನು ತರಲು ಸೂಚಿಸಲಾಗಿದೆ.

ಮೊಂತಿ ಫೆಸ್ತ್ ಅಥವಾ ತೆನೆ ಹಬ್ಬ ಕುಟುಂಬದ ಹಬ್ಬವಾಗಿ ಆಚರಿಸಲ್ಪ ಡುವುದರಿಂದ ಚರ್ಚಿನ ಸಂತ ವಿನ್ಸೆಂಟ್ ದಿ ಪಾವ್ಲ್ ಸೊಸೈಟಿ ಸದಸ್ಯರು ಚರ್ಚ್ ವ್ಯಾಪ್ತಿಯ ಬಡ ಕುಟುಂಬಗಳಿಗೆ ಹಬ್ಬವನ್ನು ಆಚರಿಸಲು ಬೇಕಾದ ವಸ್ತುಗಳನ್ನು ನೀಡಿ ಸಹಕರಿಸಿ ಪ್ರತಿಯೊಬ್ಬರು ತೆನೆ ಹಬ್ಬವನ್ನು ಸಂತೋಷದಿಂದ ಕುಟುಂಬ ಸಮೇತರಾಗಿ ಆಚರಿಸಲು ಸಹಕಾರ ನೀಡಲಿದೆ.

‘ಗಣೇಶ ಚತುರ್ಥಿ, ಮೊಂತಿ ಫೆಸ್ತ್ ಹಬ್ಬಗಳು ನೇರವಾಗಿ ಪರಿಸರಕ್ಕೆ ಸಂಬಂಧಪಟ್ಟಿದ್ದು, ಸ್ಥಳೀಯ ಕೃಷಿಕರಿಗೆ ಸಹಾಯ ಮಾಡುವುದರೊಂದಿಗೆ, ಸರ್ವ ಧರ್ಮೀಯ ಕೃಷಿಕರನ್ನು ಪೋತ್ಸಾಹಿಸಿ ಸಾವಯವ ಮಾದರಿಯಲ್ಲಿ ರೆತರಿಗೆ ತರಕಾರಿ ಮತ್ತು ಆಹಾರೋತ್ಪನ್ನಗಳನ್ನು ಬೆಳೆಯಲು ನಾವು ಉತ್ತೆಜಿಸುವ ಜೊತೆಗೆ ಗ್ರಾಹಕರಿಗೂ ನೇರವಾಗಿ ರೆತರಿಂದ ಖರೀದಿಗೆ ಅವಕಾಶ ಮಾಡಿ ಕೊಡಬೇಕು ಎಂಬ ಕಲ್ಪನೆಯೊಂದಿಗೆ ಈ ತರಕಾರಿ ಸಂತೆ ಸಂಘಟಿಸಲಾಗಿದೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ಗುಣಮಟ್ಟದ ತರಕಾರಿ ಸಾರ್ವಜನಿಕರಿಗೆ ಇಲ್ಲಿ ಲಭ್ಯವಾಗುತ್ತಿದೆ’

-ವಂ.ಡೆನಿಸ್ ಡೆಸಾ, ಧರ್ಮಗುರುಗಳು, ಸಂತ ಅನ್ನಮ್ಮ ದೇವಾಲಯ

‘ಹಲವಾರು ವರ್ಷಗಳಿಂದ ಮನೆಯಲ್ಲಿ ಸಾವಯವ ಗೊಬ್ಬರವನ್ನು ಬಳಸಿ ವಿವಿಧ ತರಕಾರಿ ಬೆಳೆಗಳನ್ನು ಬೆಳೆಸುತ್ತಿದ್ದು ಸ್ಥಳೀಯ ಅಂಗಡಿಗಳಿಗೆ ನೀಡುತ್ತಿದ್ದು ಸೂಕ್ತ ದರ ಲಭಿಸುತ್ತಿಲ್ಲ. ದೂರದ ಮಾರುಕಟ್ಟೆಗೆ ಕೊಂಡೊಯ್ಯಲು ವಾಹನ ಬಾಡಿಗೆ ಇನ್ನಿತರ ಖರ್ಚು ಬರುತ್ತಿದ್ದು ಹತ್ತಿರದಲ್ಲೇ ಇಂತಹ ತರಕಾರಿ ಸಂತೆ ಆಯೋಜಿಸಿರುವುದರಿಂದ ನಮ್ಮ ತರಕಾರಿಗೆ ಉತ್ತಮ ದರ ಲಭಿಸಿದೆ’

-ಗೋಪಾಲ ಕೆ., ಕೃಷಿಕರು, ಬಡಾನಿಡಿಯೂರು



share
ವಾರ್ತಾಭಾರತಿ
ವಾರ್ತಾಭಾರತಿ
Next Story
X