Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 250 ಕ್ಕೂ ಹೆಚ್ಚು ಅಕ್ರಮಸಕ್ರಮ ಅರ್ಜಿಗಳು...

250 ಕ್ಕೂ ಹೆಚ್ಚು ಅಕ್ರಮಸಕ್ರಮ ಅರ್ಜಿಗಳು ವಿಲೇವಾರಿಗೆ ಬಾಕಿ : ಅರಣ್ಯ ಇಲಾಖೆಯ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ19 Nov 2025 2:36 PM IST
share
ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಜಂಟಿ ಸರ್ವೆಗೆ ತಹಶೀಲ್ಧಾರ್‌ ಹಾಗೂ ಅರಣ್ಯ ಇಲಾಖೆಗೆ ಮನವಿ

ಕಾರ್ಕಳ: ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ಹೆಬ್ರಿ ಕಾರ್ಕಳ ಇದರ ಸಾಮಾಜಿಕ ಹೊಣೆಗಾರಿಕೆ ಹಿನ್ನಲೆಯಲ್ಲಿ ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಅಕ್ರಮ ಸಾಗುವಳಿದಾರರಿಗೆ ತಮ್ಮ ಜಮೀನುಗಳ ಪಟ್ಟಾ ಹಕ್ಕುಪತ್ರ ಪಡೆಯಲು ಕಾನೂನು ಸಮಸ್ಯೆಯಾಗಿದೆ. ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಜಂಟಿ ಸರ್ವೆಯನ್ನು ನಡೆಸಿ ಹಕ್ಕುಪತ್ರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು ಹೆಬ್ರಿ ತಹಶೀಲ್ಧಾರ್‌ ಮತ್ತು ಅರಣ್ಯ ಇಲಾಖೆಗೆ ನಿಯೋಗದೊಂದಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ ಎಂದು ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌‌ ಅಧ್ಯಕ್ಷರಾದ ನೀರೆ ಕೃಷ್ಣ ಶೆಟ್ಟಿ ತಿಳಿಸಿದರು.

ನಾಡ್ಪಾಲು ಗ್ರಾಮದಲ್ಲಿ 150 ಮತ್ತು ಹೆಬ್ರಿ ಗ್ರಾಮದ 100 ಕ್ಕಿಂತ ಹೆಚ್ಚಿನ ಅಕ್ರಮ ಸಕ್ರಮದಲ್ಲಿ ಸಲ್ಲಿಸಿದ ಅರ್ಜಿ ನಮೂನೆ 50,53 ಮತ್ತು 57ರ ಫಲಾನುಭವಿಗಳಿಗೆ ಅರಣ್ಯಮತ್ತು ಕಂದಾಯ ಇಲಾಖೆಯ ಭೂಮಿಯನ್ನು ಜಂಟಿ ಸರ್ವೆ ನಡೆಸಿ ಪಟ್ಟಾ ಪತ್ರವನ್ನು ದೊರಕುವಂತಾಗಲು ಆದೇಶ ನೀಡುವಂತೆ ನೀರೆ ಕೃಷ್ಣ ಶೆಟ್ಟಿ ಮನವಿ ಮಾಡಿದ್ದಾರೆ.

ಪರಭಾದಿತ ಅರಣ್ಯ ಪ್ರದೇಶವಿದ್ದಲ್ಲಿ, ಅದಕ್ಕೆ ಹೊಂದಿಕೊಂಡಿರುವ ಸರ್ವೆ ನಂಬ್ರಗಳಲ್ಲಿ ಗೊಂದಲಗಳಿದ್ದರೆ ಕಂದಾಯ ಇಲಾಖೆಯಿಂದ ಪ್ರಸ್ತಾವನೆಯನ್ನು ನಿಯಮನುಸಾರ ಮುಂದಿನ ಕ್ರಮಕ್ಕಾಗಿ ಅರಣ್ಯ ಇಲಾಖೆಗೆ ಕಳುಹಿಸುವಂತೆ ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದು ನೀರೆ ಕೃಷ್ಣ ಶೆಟ್ಟಿಯವರು ತಿಳಿಸಿದರು.

ಹೆಬ್ರಿ ತಾಲ್ಲೂಕಿನ ನಾಡ್ಪಾಲು ಗ್ರಾಮದ ಸರ್ವೆ ನಂಬ್ರ 126ರಲ್ಲಿ 28205 ಎಕರೆ, ಹೆಬ್ರಿ ಗ್ರಾಮದ ಸರ್ವೆ ನಂಬ್ರ 210ರಲ್ಲಿ 2238 ಎಕರೆ ಸೇರಿ ಒಟ್ಟು 30343 ಎಕರೆ ವಿಸ್ತೀರ್ಣವಿದೆ. ಆದರೆ ಹೆಬ್ರಿ ವಲಯದ ಅರಣ್ಯ ದಾಖಲೆಗಳ ಪ್ರಕಾರ 26653 ಎಕರೆ ಮಾತ್ರ ಅರಣ್ಯ ಪ್ರದೇಶವಾಗಿದ್ದು ಉಳಿಕೆಯ 1550 ಎಕರೆಗೂ ಹೆಚ್ಚಿನ ಕಂದಾಯ ಅನಾಧೀನ ಭೂಮಿಗಳು 2 ಸರ್ವೆ ನಂಬರ್‌ಗಳಲ್ಲಿ ಅಡಕವಾಗಿದೆ.

ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಸರ್ವೆ ನಂಬರ್‌ ಗಳ ಜಮೀನುಗಳನ್ನು ಜಂಟಿ ಸರ್ವೆ ನಡೆಸಿದರೆ ಅರಣ್ಯ ಇಲಾಖೆಯ ತಾಂತ್ರಿಕ ಸಮಸ್ಯೆಗಳಿಂದ 50-60 ವರ್ಷಗಳಿಂದ ಸಾಗುವಾಳಿ ಮಾಡಿಕೊಂಡು ತಮ್ಮ ಜಾಗದ ಹಕ್ಕುಪತ್ರಕ್ಕಾಗಿ ಎದುರು ನೋಡುತ್ತಿರುವ ಮನೆಮಂದಿಗೆ ನ್ಯಾಯ ದೊರೆಯುವ ಮೂಲಕ ಬಡ ಕೃಷಿಕರಿಗೆ ಶೀಘ್ರವಾಗಿ ಅಕ್ರಮಸಕ್ರಮ ಕಾಯ್ದೆಯಂತೆ ಪಟ್ಟಾ ಪತ್ರ ನೀಡಲು ಅವಕಾಶವಿದೆ. ಕೂಡಲೇ ಕ್ರಮ ಕೈಗೊಳ್ಳುವಂತೆ ನೀರೆ ಕೃಷ್ಣ ಶೆಟ್ಟಿಯವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X