Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೂಡಲೇ ಕಾರ್ಕಳ ತಾಲೂಕು ಕೆಡಿಪಿ ಸಭೆ...

ಕೂಡಲೇ ಕಾರ್ಕಳ ತಾಲೂಕು ಕೆಡಿಪಿ ಸಭೆ ಕರೆಯಲು ಎಂ.ಪಿ.ಮೊಯ್ದಿನಬ್ಬ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Jun 2026 2:44 PM IST
share
ಕೂಡಲೇ ಕಾರ್ಕಳ ತಾಲೂಕು ಕೆಡಿಪಿ ಸಭೆ ಕರೆಯಲು ಎಂ.ಪಿ.ಮೊಯ್ದಿನಬ್ಬ ಆಗ್ರಹ

ಕಾರ್ಕಳ, ಜೂ.22: ರಾಜ್ಯ ಸರಕಾರವು ಕಾರ್ಕಳ ತಾಲೂಕು ಕೆಡಿಪಿ ಸದಸ್ಯರ ನೇಮಕಾತಿ ಮಾಡಿ ಹಲವು ತಿಂಗಳುಗಳೇ ಕಳೆದಿದ್ದರೂ ಈ ಸಮಿತಿಯ ಅಧ್ಯಕ್ಷರಾದ ಕಾರ್ಕಳ ಶಾಸಕರು ಇದುವರೆಗೆ ಸಭೆ ಕರೆದಿಲ್ಲ. ಈ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರುತ್ತಿರುವ ಶಾಸಕರು ತಕ್ಷಣ ಕೆಡಿಪಿ ಸಭೆ ಕರೆದು ಕ್ಷೇತ್ರದ ಪ್ರಗತಿಯ ಬಗ್ಗೆ ಚರ್ಚೆ ನಡೆಸಬೇಕು ಕಾಂಗ್ರೆಸ್ ಮುಖಂಡ, ಕೆಡಿಪಿ ಸಮಿತಿ ಸದಸ್ಯ ಎಂ.ಪಿ.ಮೊಯ್ದಿನಬ್ಬ ಅಗ್ರಹಿಸಿದರು

ಕಾರ್ಕಳ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ವಿವಿಧ ಅಭಿವೃದ್ಧಿ ಯೋಜನೆ, ಕಾರ್ಯಕ್ರಮಗಳನ್ನು ಸುಮಾರು 33ಕ್ಕೂ ಹೆಚ್ಚು ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುತ್ತಿದೆ. ಆ ಕಾರ್ಯಕ್ರಮ, ಯೋಜನೆಗಳ ಪ್ರಗತಿಯನ್ನು ಸಮಯಾನುಸಾರ ಪರಿಶೀಲಿಸಿ ಪರಿಣಾಮಕಾರಿಯಾಗಿ ಅನುಷ್ಠಾ ಮಾಡುವಂತಾಗಲು ಪ್ರಗತಿ ಪರಿಶೀಲನಾ ಸಭೆ ತೀರಾ ಅಗತ್ಯವಾಗಿದೆ. ಆದರೆ ಕಾರ್ಕಳ ಶಾಸಕರು ಆ ಸಮಿತಿಯ ಅಧ್ಯಕ್ಷರಾಗಿ ಈ ಕೆಲಸವನ್ನು ಮಾಡದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಕೇವಲ ಶಾಸಕರೊಬ್ಬರೇ ಅಧಿಕಾರಿಗಳೊಂದಿಗೆ ಸಭೆ ನಡೆಸುವುದು, ಸರಕಾರದಿಂದ ನಾಮ ನಿರ್ದೇಶಿತರಾದ ಸದಸ್ಯರ ಅವಾಗಣನೆ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಸರಕಾರದ ಯೋಜನೆ ಕಾರ್ಯಕ್ರಮಗಳು ನನ್ನ ಇಚ್ಛೆಗೆ ಅನುಗುಣವಾಗಿ ನಡೆಯಬೇಕು ಎಂಬ ದೋರಣೆ ಸರಿಯಲ್ಲ. ಸರಕಾರದಿಂದ ನಾಮನಿರ್ದೇಶನ ಗೊಂಡವರಿಗೂ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಾಳಜಿ ಇದೆ ಎಂಬುವುದನ್ನು ಶಾಸಕರ ಗಮನಕ್ಕೆ ತರ ಬಯಸುತ್ತೇವೆ ಎಂದರು.

ಕೆಡಿಪಿ ಸಭೆಯ ನಿರ್ಲಕ್ಷ್ಯದ ಪರಿಣಾಮಕ್ಕೆ ಅತೀ ದೊಡ್ಡ ಉದಾಹರಣೆ ಸರಕಾರಿ ಆಸ್ಪತ್ರೆಯ ಮಹಿಳಾ ವೈದ್ಯಾಧಿಕಾರಿಗಳ ನೇಮಕಾತಿ, ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಲ್ಲದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೆ ಎನ್ನುವ ಅನೇಕ ದೂರುಗಳು ಬಂದಿದ್ದವು. ಒಂದು ವೇಳೆ ಕೆಡಿಪಿ ಸಭೆ ಕರೆದಿದ್ದರೆ ಈ ಬಗ್ಗೆ ಚರ್ಚೆ ನಡೆಸಿ ಪರಿಹಾರವನ್ನು ಕಂಡುಕೊಳ್ಳಬಹುದಿತ್ತು. ಈ ಬಗ್ಗೆ ಶಾಸಕರ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣುತ್ತದೆ. ಯಾಕೆಂದರೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಸರಕಾರಿ ಆಸ್ಪತ್ರೆಗೆ ಬೇಟಿ ನೀಡಿದ ಒಂದೇ ದಿನ ವೈದ್ಯರ ನೇಮಕವಾಗುತ್ತದೆ. ಆದರೆ ಕಳೆದ 22 ವರ್ಷಗಳಿಂದ ಶಾಸಕರಾಗಿ, ಸಚಿವರಾಗಿ ಅಧಿಕಾರ ನಡೆಸುವ ಶಾಸಕರಿಂದ ಇದು ಯಾಕೆ ಸಾಧ್ಯವಾಗಲಿಲ್ಲ ಎಂದು ಮೊಯ್ದಿನಬ್ಬ ಪ್ರಶ್ನಿಸಿದರು.

ಸಭೆಯಲ್ಲಿ ಕೆಡಿಪಿ ಸದಸ್ಯರಾದ ರುಕ್ಮಯ ಶೆಟ್ಟಿಗಾರ್ ಕುಕ್ಕುಂದೂರು, ಅಮಿತಾ ಶೆಟ್ಟಿ ಸಾಣೂರು, ಉಪಸ್ಥಿತರಿದ್ದರು.

Tags

M.P.Moidinabbakarkala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X