Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಂಗೊಳ್ಳಿ ಅಗ್ನಿ ದುರಂತ ಪ್ರದೇಶಕ್ಕೆ...

ಗಂಗೊಳ್ಳಿ ಅಗ್ನಿ ದುರಂತ ಪ್ರದೇಶಕ್ಕೆ ಸಂಸದ ರಾಘವೇಂದ್ರ ಭೇಟಿ

ವಾರ್ತಾಭಾರತಿವಾರ್ತಾಭಾರತಿ16 Nov 2023 9:32 PM IST
share
ಗಂಗೊಳ್ಳಿ ಅಗ್ನಿ ದುರಂತ ಪ್ರದೇಶಕ್ಕೆ ಸಂಸದ ರಾಘವೇಂದ್ರ ಭೇಟಿ

ಕುಂದಾಪುರ: ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು ೮ ಮೀನುಗಾರಿಕೆ ಬೋಟುಗಳು ಹಾಗೂ ಒಂದು ದೋಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು ಘಟನೆ ಬಗ್ಗೆ ಸಂಬಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಮೀನುಗಾರರು ಪುನಃ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಉದ್ದೇಶದಿಂದ ಆದಷ್ಟೂ ಶೀಘ್ರ ಸರಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಬಿಡುಗಡೆಗೆ ಪ್ರಯತ್ನಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಮುದ್ರವನ್ನು ನಂಬಿ ಬದುಕನ್ನು ಕಟ್ಟಿಕೊಂಡ ಮೀನುಗಾರರ ಬೋಟ್ ದುರಂತದಿಂದ ಸುಮಾರು 10 ಕೋಟಿ ರೂ.ನಷ್ಟ ಆಗಿದೆ. ಅಗ್ನಿ ಅನಾಹುತದಲ್ಲಿ ಕೋಟ್ಯಾಂತರ ರೂ. ನಷ್ಟವಾ ಗಿದೆ. 9 ಬೋಟುಗಳು, ದೋಣಿ, ಡಿಂಗಿ ಹಾಗೂ ಬಲೆಗಳು ಸುಟ್ಟು ಹೋಗಿವೆ. ಇದರಿಂದ ಮೀನುಗಾರರ ಜೀವನ ಸಂಪೂರ್ಣ ಹಾಳಾಗಿದೆ ಎಂದರು.

ಈ ಬಗ್ಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರೊಂದಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಇಲ್ಲಿನ ಘಟನೆ ಬಗ್ಗೆ ತಿಳಿಸಿ ಪ್ರಕರಣದ ಗಂಭೀರತೆ ಬಗ್ಗೆ ಮನವರಿಕೆ ಮಾಡಲಾಗಿದೆ. ಆದ್ದರಿಂದ ಮೀನು ಗಾರರು ಮತ್ತೊಮ್ಮೆ ಬದುಕನ್ನು ಕಟ್ಟಿಕೊಳ್ಳಲು ಸರಕಾರ ಸಹಾಯ ಸಹಕಾರ ನೀಡಬೇಕು. ಮುಖ್ಯಮಂತ್ರಿಗಳು ವಿಶೇಷ ಪರಿಹಾರ ರೂಪದಲ್ಲಿ 10 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಗಿದೆ ಎಂದರು.

ರಾಜ್ಯದ ಮೀನುಗಾರಿಕಾ ಸಚಿವರು ಘಟನಾ ಸ್ಥಳಕ್ಕೆ ಬಂದು ಇಲ್ಲಿನ ವಸ್ತುಸ್ಥಿತಿಯನ್ನು ನೋಡಿದ್ದಾರೆ. ಕಷ್ಟದ ಪರಿಸ್ಥಿತಿಯಲ್ಲಿ ಮೀನುಗಾರರ ಸಹಾಯ ಸಹಕಾರಕ್ಕೆ ಮುಖ್ಯಮಂತ್ರಿಗಳು ಹಾಗೂ ಸರಕಾರ ನಿಲ್ಲುವ ಭರವಸೆ ಇದೆ ಎಂದು ಹೇಳಿದ ಅವರು ಇನ್ನೊಂದು ವಾರದೊಳಗೆ ಸರಕಾರ ಪರಿಹಾರವನ್ನು ಬಿಡುಗಡೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.

ಕರಾವಳಿ ತೀರದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಪಂಪ್ ಹೌಸ್ ನಿರ್ಮಾಣದ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು. ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ತಯಾರಿಸಿ ಜಾರಿಗೊಳಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ರಾಜ್ಯ ಸರಕಾರ ಕೂಡ ಈ ಬಗ್ಗೆ ಗಮನಹರಿಸಬೇಕು. ಮೀನುಗಾರರಿಗೆ ಹಾಗೂ ಮೀನು ಗಾರಿಕೆಗೆ ಸುರಕ್ಷತೆ ನೀಡಲು ಆದ್ಯತೆ ನೀಡಲು ಹೆಚ್ಚಿನ ಗಮನ ನೀಡಬೇಕಿದೆ ಎಂದು ಅವರು ಹೇಳಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ ಕುಮಾರ ಶೆಟ್ಟಿ, ಉಪಾಧ್ಯಕ್ಷ ವಿನೋದ ಭಂಡಾರಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಬಿ.ಎಸ್. ಸುರೇಶ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಶರತ್ ಕುಮಾರ ಶೆಟ್ಟಿ, ಸುರೇಂದ್ರ ಖಾರ್ವಿ, ನಾಗರಾಜ ಶೆಟ್ಟಿ ನಾರ್ಕಳಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಹರೀಶ ಮೇಸ್ತ, ಗ್ರಾಪಂ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X