Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುದರಂಗಡಿ ಡೇವಿಡ್ ಡಿಸೋಜ ಶೂಟೌಟ್...

ಮುದರಂಗಡಿ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಸೂತ್ರಧಾರನ ಪತ್ತೆಗೆ ಉತ್ತರ ಭಾರತದಲ್ಲಿ ಶೋಧ; ಹಲವರ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ9 Aug 2026 9:53 PM IST
share
ಮುದರಂಗಡಿ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಸೂತ್ರಧಾರನ ಪತ್ತೆಗೆ ಉತ್ತರ ಭಾರತದಲ್ಲಿ ಶೋಧ; ಹಲವರ ವಿಚಾರಣೆ

ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಸೂತ್ರಧಾರನ ಸುಳಿವು ಈಗಾಗಲೇ ಪೊಲೀಸರಿಗೆ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ತಂಡ ಉತ್ತರ ಭಾರತಕ್ಕೆ ತೆರಳಿ ಹಲವರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.

ಅದಾನಿ ಯುಪಿಸಿಎಲ್ ಕಾಮಗಾರಿಗೆ ಸಂಬಂಧಿಸಿದ ಹಣಕಾಸು ವಿಚಾರದಲ್ಲಿ ಡೇವಿಡ್ ಡಿಸೋಜ ಅವರನ್ನು ಸುಪಾರಿ ನೀಡಿ ಹತ್ಯೆ ನಡೆಸಿರುವುದರಿಂದ ಕಾಮಗಾರಿ ಗುತ್ತಿಗೆ ವಹಿಸಿರುವ ಉತ್ತರ ಭಾರತದ ಗುತ್ತಿಗೆದಾರನ ಬಂಧನಕ್ಕೆ ಎರಡು ಪೊಲೀಸ್ ತಂಡ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶಕ್ಕೆ ತೆರಳಿದೆ.

ಡೇವಿಡ್ ಡಿಸೋಜರ ಹತ್ಯೆಗೆ ಸುಪಾರಿ ನೀಡಿರುವ ಸೂತ್ರಧಾರನ ಬಗ್ಗೆ ಈಗಾಗಲೇ ಪೊಲೀಸರಿಗೆ ಸುಳಿವು ದೊರೆತಿದ್ದು, ಆ ನಿಟ್ಟಿನಲ್ಲಿ ಈಗಾಗಲೇ ಹರಿಯಾಣ ತಲುಪಿರುವ ತಂಡ ಆರೋಪಿಗಳಿಗಾಗಿ ವ್ಯಾಪಾಕ ಶೋಧ ಕಾರ್ಯ ನಡೆಸುತ್ತಿದೆ. ತಂಡ ಹರಿಯಾಣ, ಪಂಬಾಜ್ ರಾಜ್ಯಗಳಲ್ಲಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈವರೆಗೆ ಯಾರನ್ನು ಕೂಡ ಪೊಲೀಸರು ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆ.7ರಂದು ಮದ್ಯಾಹ್ನ 3.45ರ ಸುಮಾರಿಗೆ ಮುದರಂಗಡಿಯಲ್ಲಿ ಡೇವಿಡ್ ಡಿಸೋಜರನ್ನು ಸುಫಾರಿ ಕಿಲ್ಲರ್‌ಗಳು ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಿದ್ದು, ಮಿಂಚಿನ ಕಾರ್ಯಾಚರಣೆಯಲ್ಲಿ ಪೊಲೀಸರು ಆರೋಪಿಗಳಾದ ಉತ್ತರಪ್ರದೇಶ ರಾಜು, ಉತ್ತರಖಾಂಡದ ಅಜಯ್ ರಸ್ತೋಗಿ ಮತ್ತು ಬಿಹಾರ ರಾಜ್ಯದ ಜಿಯಾಹುಲ್ ವಜೂಲ್ ಶೇಖ್‌ನನ್ನು ಬಂಧಿಸಿದ್ದರು. ಇದರಲ್ಲಿ ಪ್ರಮುಖ ಆರೋಪಿ ರಾಜು ಕಾಲಿಗೆ ಗುಂಡೇಟು ತಗಲಿದ್ದು, ಆತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ?

ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ಪೈಕಿ ಅಜಯ್ ರಸ್ತೋಗಿ ಮತ್ತು ಜಿಯಾಹುಲ್ ವಜೂಲ್ ಶೇಖ್‌ನನ್ನು ಪ್ರಕರಣದ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ನೇತೃತ್ವದಲ್ಲಿ ಶನಿವಾರ ರಾತ್ರಿ ವೇಳೆ ನ್ಯಾಯಾಧೀಶರ ನಿವಾಸ ಕಚೇರಿ ಮುಂದೆ ಹಾಜರುಪಡಿಸ ಲಾಯಿತು.

ಇಬ್ಬರು ಆರೋಪಿಗಳನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸೋಮವಾರ ಪೊಲೀಸರು ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ ಈ ಹತ್ಯೆಗೆ ಸ್ಥಳೀಯವಾಗಿ ಸಹಕರಿಸಿದವರನ್ನು ಪತ್ತೆ ಹಚ್ಚಲು ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನ್ಮೋಖರಾಗಲಿದ್ದಾರೆ.

‘ಡೇವಿಡ್ ಡಿಸೋಜರ ಹತ್ಯೆ ಪ್ರಕರಣದ ತನಿಖೆ ಮುಂದುವರೆದಿದ್ದು, ನಮ್ಮ ತಂಡ ಈಗಾಗಲೇ ಉತ್ತರ ಭಾರತಕ್ಕೆ ತೆರಳಿ ತನಿಖೆ ನಡೆಸುತ್ತಿದೆ. ಈ ಸಂಬಂಧ ಈವರೆಗೂ ಯಾರನ್ನು ಕೂಡ ಬಂಧಿಸಿಲ್ಲ. ಈಗಾಗಲೇ ಬಂಧಿತರಾಗಿರುವ ಆರೋಪಿಗಳನ್ನು ಸೋಮವಾರ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದುʼ.

-ಹರಿರಾಂ ಶಂಕರ್, ಎಸ್ಪಿ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X