ಜ.17ಕ್ಕೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಉಡುಪಿ, ಜ.14: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಸಮಾರಂಭ ಜ.17ರ ಶನಿವಾರ ಎಂ.ಜಿ.ಎಂ ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.
ಈ ವರ್ಷದ ಪ್ರಶಸ್ತಿಯನ್ನು ಹಿರಿಯ ಲೇಖಕಿ ಡಾ. ಗಿರಿಜಾ ಶಾಸ್ತ್ರಿ ಅವರಿಗೆ ಪ್ರದಾನ ಮಾಡಲಾಗುವುದು. ಅಧ್ಯಕ್ಷತೆಯನ್ನು ಮುಳಿಯ ಪ್ರಶಸ್ತಿ ಸಮಿತಿಯ ಅಧ್ಯಕ್ಷ ಡಾ.ನಾ ದಾಮೋದರ ಶೆಟ್ಟಿ ವಹಿಸಲಿದ್ದು, ಹಿರಿಯ ವಿದ್ವಾಂಸ ಡಾ. ಬಿ.ಎ.ವಿವೇಕ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಗಳೂರಿನ ವಿಶ್ರಾಂತ ಪ್ರಾಧ್ಯಾಪಕಿ ಡಾ.ಸರಸ್ವತಿ ಅಭಿನಂದನಾ ಭಾಷಣ ಮಾಡಲಿರುವರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವನಿತಾ ಮಯ್ಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





