ಉಡುಪಿ, ಆ.16: ನಾಗರಪಂಚಮಿ ಪ್ರಯುಕ್ತ ಆ.17ರ ಸೋಮವಾರದಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.