Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದ ಅಸ್ಪಶ್ಯತೆ, ಅಸಮಾನತೆ ನಿವಾರಣೆಗೆ...

ಸಮಾಜದ ಅಸ್ಪಶ್ಯತೆ, ಅಸಮಾನತೆ ನಿವಾರಣೆಗೆ ನಾರಾಯಣಗುರು ಕಾರಣ: ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ31 Aug 2023 8:53 PM IST
share
ಸಮಾಜದ ಅಸ್ಪಶ್ಯತೆ, ಅಸಮಾನತೆ ನಿವಾರಣೆಗೆ ನಾರಾಯಣಗುರು ಕಾರಣ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಆ.31: ಸಮಾಜದಲ್ಲಿ ಅಂದು ವ್ಯಾಪಕವಾಗಿದ್ದ ಅಸ್ಪಶ್ಯತೆ, ಹಾಗೂ ಅಸಮಾನತೆಯನ್ನು ತೊಡೆದು ಹಾಕುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ನಡೆಸಿದ ಪ್ರಯತ್ನ ಬದಲಾವಣೆಗೆ ಕಾರಣವಾಯಿತು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದ ಬನ್ನಂಜೆಯಲ್ಲಿರುವ ಶ್ರೀನಾರಾಯಣ ಗುರು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡುತಿದ್ದರು.

ಸಮಾಜದ ಪ್ರತಿಯೊಬ್ಬರಲ್ಲೂ ಸಮಬಾಳು-ಸಮಪಾಲು ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮೂಡಿಸಿದ ವರು ನಾರಾಯಣಗುರುಗಳು. ಶಾಂತಿಯ ಮೂಲಕ ಕ್ರಾಂತಿಕಾರಿ ಬದಲಾವಣೆ ತರುವ ಸಮಾಜ ಸುಧಾರಣೆಯ ಕೆಲಸ ವನ್ನು ನಾರಾಯಣಗುರುಗಳು ಮಾಡಿದರು ಎಂದು ಕೋಟ ನುಡಿದರು.

ಸ್ವಾಮೀ ವಿವೇಕಾನಂದರೊಮ್ಮೆ ಕೇರಳಕ್ಕೆ ಭೇಟಿ ನೀಡಿ ಅಲ್ಲಿನ ಮನುಷ್ಯತ್ವವೇ ಇಲ್ಲದ ಸಮಾಜವನ್ನು ನೋಡಿ ಇದನ್ನು ಬದಲಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂತಹ ಸನ್ನಿವೇಶವನ್ನು ಸಮಾಜವನ್ನು ತಮ್ಮ ಸಮಾಜ ಸುಧಾರಣಾ ಕಾರ್ಯಕ್ರಮದ ಮೂಲಕ ಬದಲಾಯಿಸಿದವರು ನಾರಾಯಣಗುರುಗಳು ಎಂದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ಸಮಾಜದಲ್ಲಿ ಮೇಲು-ಕೀಳು ಭಾವನೆ ಬಿಟ್ಟು, ಒಂದೇ ಜಾತಿ, ಒಂದೇ ಮತ ಎಂಬ ಸಂದೇಶವನ್ನು ಸಾರಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಈ ಮೂಲಕ ಮನುಕುಲ ಒಂದೇ ಎಂಬ ಮೌಲ್ಯವನ್ನು ಬಿತ್ತಿದರು. ಇವರ ಆದರ್ಶಗಳು ಹಾಗೂ ತತ್ವಗಳು ಪ್ರತಿಯೊಬ್ಬರಿಗೂ ದಾರಿದೀಪ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ.ಗಣೇಶ್ ಅಮೀನ್ ಸಂಕಮಾರ್ ವಿಶೇಷ ಉಪನ್ಯಾಸ ನೀಡಿ, ದಾರ್ಶನಿಕ, ಆಧ್ಯಾತ್ಮಿಕ ಸಾಧಕರಾಗಿದ್ದ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ ನಿರ್ಮಾಣಕ್ಕಾಗಿ ಮುಂದಾದರು, ಕೆಳವರ್ಗದ ಜನರಿಗಾಗಿ ಶಿವಾಲಯಗಳನ್ನು ಕಟ್ಟಿದರು. ಇವುಗಳ ಜೊತೆ ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ತೆರೆದು, ಶಿಕ್ಷಣದ ಮಹತ್ವವನ್ನು ಸಾರಿದರು. ಮೂಢನಂಬಿಕೆಗಳು ಹಾಗೂ ಅನಿಷ್ಠ ಪದ್ಧತಿ ಗಳನ್ನು ಸಮಾಜದಿಂದ ಕಿತ್ತೊಗೆಯಲು ಶ್ರಮಿಸಿದರು ಎಂದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಬ್ರಹ್ಮಶ್ರೀ ನರಾಯಣಗುರುಗಳ ಹೆಸರಿನಲ್ಲಿ ಪ್ರಶಸ್ತಿಯೊಂದನ್ನು ಸ್ಥಾಪಿಸಬೇಕು ಎಂದು ಸಲಹೆ ನೀಡಿದರು. ಉಡುಪಿ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಬಿ ಮಾಧವ ಪೂಜಾರಿ ಅವರೂ ಮಾತನಾಡಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಕುರಿತಂತೆ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿ ಗಳಿಗೆ ಬಹುಮಾನ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಸವಿತಾ ಹರಿರಾಮ್, ಗಿರೀಶ್ ಕಾಂಚನ್, ಎಡ್ವಿನ್ ಕರ್ಕಡ, ಕಿರಣ್‌ಕುಮಾರ್, ಮೀನಾಕ್ಷಿ ಮಾಧವ ಬನ್ನಂಜೆ ಹಾಗೂ ಇತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ದಯಾನಂದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X