Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ...

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ರಾಷ್ಟ್ರೀಯ ಮಟ್ಟದ ಸನ್ಮಾನ: ಎಚ್.ಎಂ. ರೇವಣ್ಣ

ಅ.2, 3: ಬೆಳಗಾವಿಯಲ್ಲಿ ಕುರುಬರ ರಾಷ್ಟ್ರೀಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ15 Sept 2023 7:13 PM IST
share
ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ರಾಷ್ಟ್ರೀಯ ಮಟ್ಟದ ಸನ್ಮಾನ: ಎಚ್.ಎಂ. ರೇವಣ್ಣ

ಉಡುಪಿ, ಸೆ.15: ಕುರುಬ ಜನಾಂಗದವರ ಅಖಿಲ ಭಾರತ ಮಟ್ಟದ ಸಂಘಟನೆಯಾದ ಶೆಫರ್ಡ್ಸ್ ಇಂಡಿಯಾ ಇಂಟರ್‌ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶ ಅಕ್ಟೋಬರ್ 2 ಮತ್ತು 3ರಂದು ಬೆಳಗಾವಿಯಲ್ಲಿ ನಡೆಯಲಿದೆ ಎಂದು ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಮಾಜಿ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುವ ದೇಶದಾದ್ಯಂತದಿಂದ ಬರುವ ಸುಮಾರು ಐದು ಲಕ್ಷ ಮಂದಿ ಕುರುಬ ಜನಾಂಗದವರು ಈ ಎರಡು ದಿನಗಳ ಸಮಾವೇಶ ದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

2014ರಲ್ಲಿ ಗಾಂಧಿ ಜಯಂತಿಯ ದಿನದಂದು ಅಸ್ತಿತ್ವಕ್ಕೆ ಬಂದ ಶೆಫರ್ಡ್ ಇಂಡಿಯಾ ಇಂಟರ್‌ನ್ಯಾಷನಲ್‌ನ ರಾಷ್ಟ್ರೀಯ ಸಮಾವೇಶವನ್ನು ಪ್ರತಿವರ್ಷ ಅದೇ ದಿನ ಕರೆಯಲಾಗುತ್ತದೆ. ತೆಲಂಗಾಣ, ಗುಜರಾತ್ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ನಡೆದ ರಾ. ಸಮಾವೇಶ ಈ ಬಾರಿ ಬೆಳಗಾವಿಯಲ್ಲಿ ನಡೆಯಲಿದೆ. ಅ.2ರಂದು ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆದರೆ, ಎರಡನೇ ದಿನದಂದು ರಾಷ್ಟ್ರೀಯ ಸಮಾವೇಶ ನಡೆಯಲಿದೆ ಎಂದು ಅವರು ವಿವರಿಸಿದರು.

ದೇಶದಲ್ಲೇ ಮೊದಲ ಬಾರಿ ಕುರುಬ ಸಮುದಾಯಕ್ಕೆ ಸೇರಿದ ಸಿದ್ಧರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ರಾಷ್ಟ್ರೀಯ ಮಟ್ಟದಲ್ಲಿ ಸನ್ಮಾನಿಸಲಾಗುತ್ತಿದೆ. ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವರು, ಉತ್ತರ ಪ್ರದೇಶದ ಸಚಿವ ಅಜಿತ್ ಸಿಂಗ್, ಮಹಾರಾಷ್ಟ್ರದ ಹಾಲಿ ಮತ್ತು ಮಾಜಿ ಸಚಿವರು, ತಮಿಳುನಾಡು, ರಾಜಸ್ತಾನ, ಗೋವಾಗಳ ಸಚಿವರು ಹಾಗೂ ಮಾಜಿ ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.

ರಾಜ್ಯಾದ್ಯಂತ ಹರಿದುಹಂಚಿಹೋಗಿದ್ದ ಕುರುಬ ಸಮಾಜವನ್ನು ಕಳೆದ 90ರ ದಶಕದಲ್ಲಿ ಸಿದ್ಧರಾಮಯ್ಯ ಅವರ ನೇತೃತ್ವ ದಲ್ಲಿ ಕನಕದಾಸ ಜಯಂತಿಯನ್ನು ನಡೆಸುವ ಮೂಲಕ ರಾಜ್ಯಾದ್ಯಂತ ಸಂಘಟಿಸಲಾಗಿತ್ತು. 1994ರಲ್ಲಿ ಕಾಗಿನೆಲೆ ಮಹಾಮಠ ಸ್ಥಾಪಿಸಲಾಗಿತ್ತು ಎಂದ ರೇವಣ್ಣ, ಆ ಬಳಿಕ ರಾಷ್ಟ್ರಮಟ್ಟದಲ್ಲಿ ಕುರುಬರ ಸಂಘಟನೆಯನ್ನು ಮಾಜಿ ಸಂಸದ ವಿಶ್ವನಾಥರ ನೇತೃತ್ವದಲ್ಲಿ ಕೈಗೊಂಡು 2014ರಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್‌ನ್ಯಾಷನಲ್ ಅಸ್ತಿತ್ವಕ್ಕೆ ಬಂದಿತ್ತು ಎಂದರು.

ಎಸ್‌ಟಿಗೆ ಸೇರ್ಪಡೆ: ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆಯ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ರೇವಣ್ಣ, ಈ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ವರದಿ ರಾಜ್ಯ ಸರಕಾರದ ಕೈಸೇರಿದ್ದು, ಅದಕ್ಕೆ ಕ್ಯಾಬಿನೆಟ್ ಸಮಿತಿಯಲ್ಲಿ ಒಪ್ಪಿಗೆ ನೀಡಲಾಗಿದೆ. ವರದಿಯನ್ನು ಶಿಫಾರಸ್ಸಿನೊಂದಿಗೆ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕುರುಬರ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಎಂ.ನಾಗರಾಜು, ಬಸವರಾಜು, ಸಿದ್ಧಪ್ಪ ಐಹೊಳೆ, ಹನುಮಂತ ಜಿ.ಗೋಡಿ, ಬಸವರಾಜ ಕುರುಬರ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X