ಪತ್ರಕರ್ತ ಮುಹಮ್ಮದ್ ಶರೀಫ್ ಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ

ಕಾರ್ಕಳ: ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುಹಮ್ಮದ್ ಶರೀಫ್ ಅವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ ಸೇವಾ ಸಂಘ (ರಿ) ಕರ್ನಾಟಕ ಇದರ ಸಹಯೋಗದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಗೋವಾದ ವಾಸ್ಕೊ ರವೀಂದ್ರ ಕಲಾ ಮಂಟಪದಲ್ಲಿ ನಡೆಯುವ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
Next Story





