Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯ ಸರಕಾರದಿಂದ ಕರಾವಳಿಯ 3 ಜಿಲ್ಲೆಗಳ...

ರಾಜ್ಯ ಸರಕಾರದಿಂದ ಕರಾವಳಿಯ 3 ಜಿಲ್ಲೆಗಳ ನಿರ್ಲಕ್ಷ್ಯ: ಆರೋಪ

10 ದಿನಗಳಲ್ಲಿ ಜಿಲ್ಲೆಗೆ ಅನುದಾನ ಬಿಡುಗಡೆಯಾಗದಿದ್ದರೆ ಸಿಎಂ ಮನೆ ಮುಂದೆ ಧರಣಿ: ಉಡುಪಿ ಬಿಜೆಪಿ ಶಾಸಕರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ16 Sept 2024 8:13 PM IST
share
ರಾಜ್ಯ ಸರಕಾರದಿಂದ ಕರಾವಳಿಯ 3 ಜಿಲ್ಲೆಗಳ ನಿರ್ಲಕ್ಷ್ಯ: ಆರೋಪ

ಉಡುಪಿ, ಸೆ.16: ರಾಜ್ಯ ಸರಕಾರ ಕರಾವಳಿಯ ಮೂರು ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಒಂದು ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ. ಇದೇ ಪ್ರವೃತ್ತಿ ಮುಂದುವರಿದರೆ ಮುಖ್ಯಮಂತ್ರಿಗಳ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರು, ಸಂಸತ್ ಸದಸ್ಯರೊಂದಿಗೆ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ನಗರದ ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕ ಪರವಾಗಿ ಮಾತನಾಡಿದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಈ ವಿಷಯ ತಿಳಿಸಿದರು.

ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಒಂದೂವರೆ ವರ್ಷಗಳ ಹಿಂದೆ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರಾವಳಿಯ ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಶಾಸಕರಿಗೆ ಅನುದಾನವೇ ಬಿಡುಗಡೆಯಾಗುತ್ತಿಲ್ಲ. ಜಿಲ್ಲಾಡಳಿತ ನಿರಂತರವಾಗಿ ಅಸಹಕಾರ ತೋರುತ್ತಿದೆ. ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಶಾಸಕರೆಲ್ಲರ ಪರವಾಗಿ ಸುನಿಲ್‌ಕುಮಾರ್ ಆರೋಪಗಳ ಸುರಿಮಳೆಗೆರೆದರು.

ಇದೇ ಪ್ರವೃತ್ತಿಯನ್ನು ಮುಂದುವರಿಸಿದರೆ, ಪರಿಸ್ಥಿತಿಯನ್ನು 10 ದಿನದೊಳಗೆ ಸರಿಪಡಿಸದಿದ್ದರೆ, ಅನುದಾನ ಬಿಡುಗಡೆಗೆ ಆಗ್ರಹಿಸಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಿಜೆಪಿ ಶಾಸಕರೆಲ್ಲರೂ ಸೇರಿ ಮುಖ್ಯಮಂತ್ರಿಗಳ ಮನೆ ಮುಂಧ ಧದಣಿ ನಡೆಸಲಾಗುವುದು ಎಂದು ಎಚ್ಚರಿಸಿದ ಅವರು, ಈ ಧರಣಿಗೆ ಸರಕಾರ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಸಿಎಂ ವಾಗ್ದಾನ ಏನಾಯಿತು?: ಕಳೆದ ಮಳೆಗಾಲದಲ್ಲಿ ಜುಲೈ ತಿಂಗಳಲ್ಲಿ ಭಾರೀ ಮಳೆಯಿಂದಾದ ಹಾನಿಯ ಪರಿಶೀಲ ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲೆಗೆ ಆಗಮಿಸಿದ್ದರು. ಬಳಿಕ ಅವರು ಕೆಡಿಪಿ ಸಭೆ ಕರೆದಿದ್ದರು. ಅಂದು ಸಿಎಂ ಉಪಸ್ಥಿ ತಿಯಲ್ಲಿ ನಡೆದ ಕೆಡಿಪಿ ಸಭೆಯ ಯಾವೊಂದು ನಿರ್ಣಯವೂ ಈವರೆಗೆ ಅನುಷ್ಠಾನಕ್ಕೆ ಬಂದಿಲ್ಲ. ಹಾಗಿದ್ದರೆ ಸಿಎಂ ಅವರ ಮಾತಿಗೇನು ಬೆಲೆ ಬಂತು ಎಂದು ಸುನಿಲ್‌ಕುಮಾರ್ ಪ್ರಶ್ನಿಸಿದರು.

ಸಭೆಯಲ್ಲಿ ಕಾಲುಸಂಕಗಳ ತುರ್ತು ನಿರ್ಮಾಣಕ್ಕೆ 50 ಕೋಟಿ ರೂ. ಕೊಡುತ್ತೇನೆ ಎಂದಿದ್ದರು. 2023ರ ಮಳೆಯಿಂದ ಗ್ರಾಮೀಣ ರಸ್ತೆಗಾದ ಹಾನಿಯ ರಿಪೇರಿಗೆ ಈವರೆಗೆ ಹಣ ಬಂದಿಲ್ಲ. ಬೆಳೆ ಹಾನಿ, ಶಾಲಾ ಕಟ್ಟಡ ರಿಪೇರಿ ಹಣ ನೀಡಿಲ್ಲ. ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಬಿಡಿ ಕಾಸು ಸಹ ಕೊಟ್ಟಿಲ್ಲ. ಕಳೆದೆರಡು ಎರಡು ಬಜೆಟ್‌ನಲ್ಲಿ ಉಡುಪಿಗೆ ಯಾವುದೇ ಯೋಜನೆ ನೀಡಿಲ್ಲ ಎಂದವರು ಕಿಡಿಕಾರಿದರು.

ಈ ಬಾರಿಯ ಭಾರೀ ಮಳೆಯಿಂದ ಜಿಲ್ಲೆಯಲ್ಲಾದ ಸಮಗ್ರ ಹಾನಿಗಾಗಿ ಜಿಲ್ಲಾಡಳಿತ 240 ಕೋಟಿ ರೂ.ಗಳ ವರದಿಯನ್ನು ಸರಕಾರಕ್ಕೆ ಕಳುಹಿಸಿದೆ. ಆದರೆ ಸರಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ. ಇದು ಕರಾವಳಿಯ ನಿರ್ಲಕ್ಷ್ಯವಲ್ಲದೆ ಮತ್ತಿ ನ್ನೇನು ಎಂದು ಪ್ರಶ್ನಿಸಿದ ಅವರು, ಐವರು ಬಿಜೆಪಿ ಶಾಸಕರು ಇದ್ದಾರೆ ಎನ್ನುವ ಕಾರಣಕ್ಕೆ ಅನುದಾನ ನೀಡುತ್ತಿಲ್ಲ ಎಂದು ನೇರವಾಗಿ ಆರೋಪಿಸಿದರು.

ಜಿಲ್ಲೆಯ ತಾಲೂಕು ಮಟ್ಟದ ಅಧಿಕಾರಿಗಳ ನಿರಂತರ ವರ್ಗಾವಣೆ ದಂಧೆ ನಡೆಯುತ್ತಿದೆ. ಶಾಸಕರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಸಹಕಾರ ತೋರುತಿದ್ದಾರೆ. ಸಚಿವರು ಜನಸ್ಪಂದನ ಸಭೆಗಳನ್ನು ನಡೆಸುತ್ತಿಲ್ಲ. ದಿವಾಳಿಯಾದ ಸರಕಾರದಲ್ಲಿ ಉಸ್ತುವಾರಿ ಸಚಿವರು ಕೆಡಿಪಿ ಸಭೆಯನ್ನು ಹೇಗೆ ನಡೆಸುತ್ತಾರೆ. ಜನಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಏನೆಂದು ಉತ್ತರಿಸುತ್ತಾರೆ. ಹೀಗಾಗಿ ಜಿಲ್ಲೆಯಲ್ಲಿ ಕೆಡಿಪಿ ಸಭೆಗಳೇ ನಡೆಯುತ್ತಿಲ್ಲ ಎಂದವರು ದೂರಿದರು.

ಕಳೆದೊಂದು ವರ್ಷದಿಂದ ಜಿಲ್ಲೆಯಲ್ಲಿ ರಸ್ತೆಗಳ ಪ್ಯಾಚ್ ವರ್ಕ್‌ಗೂ ಹಣ ನೀಡಿಲ್ಲ. ಗ್ರಾಮೀಣ ರಸ್ತೆಗಳಲ್ಲಿ ಓಡಾಡುವ ಸ್ಥಿತಿ ಇಲ್ಲ. ಕರಾವಳಿಯ ಎಲ್ಲಾ ಬಿಜೆಪಿಯ ಶಾಸಕರು ಸಚಿವರ ಮುಂದೆ, ಇಲಾಖೆಗಳ ಮುಂದೆ ನಮ್ಮ ಬೇಡಿಕೆಗಳನ್ನು ಇಟ್ಟಿ ದ್ದೇವೆ. ಈ ಬೇಡಿಕೆಗಳಿಗೆ ಸ್ಪಂದಿಸಿ ಸರಕಾರ ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕು. 10 ದಿನದೊಳಗೆ ಅನು ದಾನ ಬಿಡುಗಡೆಯಾಗದಿದ್ದರೆ ಅನುದಾನಕ್ಕೆ ಆಗ್ರಹಿಸಿ ಸಿಎಂ ಮನೆ ಮುಂದೆ ಧರಣಿ ಕೂರುತ್ತೇವೆ ಎಂದವರು ಘೋಷಿಸಿದರು.

ನಮ್ಮ ಮನವಿಗೆ ಹತ್ತು ದಿನದಲ್ಲಿ ಮುಖ್ಯಮಂತ್ರಿಗಳು ಉತ್ತರ ಕೊಡಬೇಕು. ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಮೊದಲನೇ ಹಂತ. ಆಗಲೂ ಸ್ಥಿತಿಯಲ್ಲಿ ಬದಲಾವಣೆಯಾಗದಿದ್ದರೆ ಎರಡನೇ ಹಂತದಲ್ಲಿ ಎರಡು ಜಿಲ್ಲೆಗಳಲ್ಲಿ ಜನಾಂದೋಲನವನ್ನು ಹಮ್ಮಿಕೊಳ್ಳಲಿದ್ದಾರೆ. ಶಾಸಕರು ರಸ್ತೆಗೆ ಇಳಿಯುವ ಮುಂಚೆ ಸರಕಾರ ಎಚ್ಚೆತ್ತುಕೊಂಡು ಕರಾವಳಿಗೆ ನ್ಯಾಯ ಕೊಡಬೇಕು ಎಂದವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.





Tags

Neglect
share
ವಾರ್ತಾಭಾರತಿ
ವಾರ್ತಾಭಾರತಿ
Next Story
X