ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

ಕೋಟ, ಅ.5: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ.4ರಂದು ಸಾಲಿಗ್ರಾಮ ಜೋಳದ ರೊಟ್ಟಿ ಹೊಟೇಲಿನ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಯಶವಂತ ಪೈ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಸುಖೇಶ್ ಹಾಗೂ ಹಿಂಬದಿ ಸವಾರ ಸುದೇಶ್ ಎಂಬವರು ಗಾಯಗೊಂಡಿದ್ದಾರೆ.
ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ಯಶವಂತ ಪೈಗೆ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.
Next Story




