ಮಲತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಮಣಿಪಾಲ : ಕಾರ್ಕಳ ತಾಲೂಕು ಕುಕ್ಕಂದೂರು ಗ್ರಾಮ ಪಂಚಾಯತ್‌ನ ಮಲ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ನೀಡಲಾದ ನೂತನ ವಾಹನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಚಾಲನೆ ನೀಡಿದರು.
ಗ್ರಾಮೀಣ ಇಲಾಖೆ ಮೂಲಕ ಒದಗಿಸಲಾದ ಈ ವಾಹನಕ್ಕೆ ಸಚಿವೆ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ., ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಹಾಗೂ ಇತರರು ಉಪಸ್ಥಿತರಿದ್ದರು.
Next Story





