ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಸಿದ್ಧಾಪುರ ಇಂದಿರಾ ವಸತಿ ಶಾಲಾ ತಂಡ ಆಯ್ಕೆ

ಸಿದ್ಧಾಪುರ, ನ.25: ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆಗಳ ವತಿಯಿಂದ ಕಡಿಯಾಳಿ ಕಮಲಾಬಾಯಿ ಪ್ರೌಢ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಸಿದ್ಧಾಪುರದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇಂದಿರಾಗಾಂಧಿ ವತಿ ಶಾಲೆ ಸಿದ್ಧಾಪುರದ ವಿದ್ಯಾರ್ಥಿಗಳಾದ ಸಾತ್ವಿಕ್, ಪ್ರತೀಕ್, ದೇವಿಪ್ರಸಾದ್ ಅವರು ಪ್ರದರ್ಶಿಸಿದ ಆಧುನಿಕ ತಂತ್ರಜ್ಞಾನವನ್ನು ಒಳಗೊಂಡ ಬಹುಪಯೋಗಿ ಕೌ ಶೆಡ್ ಮಾದರಿಯು ಪ್ರಥಮ ಸ್ಥಾನ ಪಡೆಯುವ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳ ಈ ತಂಡಕ್ಕೆ ವಿಜ್ಞಾನ ಶಿಕ್ಷಕರಾದ ಲಕ್ಷ್ಮೀ ಗಣೇಶ್ ಹಾಗೂ ಆಕಾಶ್ ಅವರು ಮಾರ್ಗದರ್ಶನದೊಂದಿಗೆ ಸಲಹೆ-ಸೂಚನೆಗಳನ್ನು ನೀಡಿದ್ದರು ಎಂದು ಶಾಲೆಯ ಪ್ರಾಂಶುಪಾಲರಾದ ಗಣೇಶ್ ಅವರು ತಿಳಿಸಿದ್ದಾರೆ.
Next Story





