ಹೆಮ್ಮಾಡಿ ಸರಕಾರಿ ಶಾಲಾ ವಾರ್ಷಿಕ ಕ್ರೀಡಾಕೂಟ

ಕುಂದಾಪುರ : ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ರವಿವಾರ ಏರ್ಪಡಿಸಲಾದ ವಾರ್ಷಿಕ ಕ್ರೀಡಾಕೂಟಕ್ಕೆ ಹಳೆ ವಿದ್ಯಾರ್ಥಿ ಅಬ್ದುಲ್ ಮುನಾಫ್ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ, ಜನತಾ ಪ್ರೌಢ ಶಾಲೆಯ ಶಿಕ್ಷಕ ಜಗದೀಶ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ರಾಘವೇಂದ್ರ ಕುಲಾಲ್, ನಿವೃತ್ತ ಶಿಕ್ಷಕ ಶಂಕರ ಮಡಿವಾಳ, ಸಿ.ಆರ್.ಪಿ.ಒ ರಾಮನಾಥ ಮೇಸ್ತ ಮಾತನಾಡಿದರು.
ಹೆಮ್ಮಾಡಿ ಗ್ರಾಪಂ ಅಧ್ಯಕ್ಷೆ ನೇತ್ರಾವತಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯೆ ರತ್ನಾ ದೇವಾಡಿಗ, ವಾರ್ಷಿಕೋತ್ಸವ ಸಮಿತಿಯ ಗೌರವಾಧ್ಯಕ್ಷ ದೇವಪ್ಪ ಪೂಜಾರಿ, ಅಧ್ಯಕ್ಷ ಶಾಂತಾರಾಮ್ ಭಟ್, ಕುಂದಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ನಾರಾಯಣ, ಪೋಷಕ ರಾಘವೇಂದ್ರ. ಬಿಮೊಗವೀರ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ವಿ.ದಿವಾಕರ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷ್ಮೀ ವಂದಿಸಿದರು. ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರೂಪಿಸಿದರು.
Next Story





