Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆ ಕಂದಾಯ ಇಲಾಖೆಯ ಆರು ತಿಂಗಳ...

ಉಡುಪಿ ಜಿಲ್ಲೆ ಕಂದಾಯ ಇಲಾಖೆಯ ಆರು ತಿಂಗಳ ಸಾಧನೆ

ವಾರ್ತಾಭಾರತಿವಾರ್ತಾಭಾರತಿ27 Nov 2023 8:45 PM IST
share
ಉಡುಪಿ ಜಿಲ್ಲೆ ಕಂದಾಯ ಇಲಾಖೆಯ ಆರು ತಿಂಗಳ ಸಾಧನೆ

ಉಡುಪಿ, ನ.27: ಕಂದಾಯ ಇಲಾಖೆ ಸರಕಾರದ ಒಂದು ಪ್ರಮುಖ ಇಲಾಖೆಯಾಗಿದ್ದು, ಮಾತೃ ಇಲಾಖೆ ಎಂದು ಗುರುತಿಸಿಕೊಳ್ಳುತ್ತದೆ. ಸಾರ್ವಜನಿಕರು ದಿನನಿತ್ಯ ಸರಕಾರಿ ಕಚೇರಿಗಳಿಗೆ ಅಲೆಯದಂತೆ ನೋಡಿಕೊಳ್ಳಲು ಕಂದಾಯ ಇಲಾಖೆಯಲ್ಲಿ ಅನೇಕ ಹೊಸ ತಂತ್ರಜ್ಞಾನ ಬಳಕೆ, ವಿಳಂಬವಾಗದಂತೆ ಕೆಲಸ ಕಾರ್ಯಗಳನ್ನು ಮಾಡಲು ನಿಗದಿತ ಕಾಲ ಗೊತ್ತುಪಡಿಸುವುದರೊಂದಿಗೆ ಶೀಘ್ರದಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ನಿರ್ದೇಶನ ದಂತೆ ಕ್ರಮಗಳನ್ನು ಕೈಗೊಂಡಿದೆ.

ಉತ್ತಮ ಸೇವೆ ನೀಡುವುದರ ಮೂಲಕ ಕಳೆದ ಆರು ತಿಂಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಂದಾಯ ಇಲಾಖೆಯ ಮೂಲಕ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಅಭಿವೃದ್ಧಿಯನ್ನು ಆದ್ಯತೆಯನ್ನಾಗಿಸಿ, ಸರಕಾರ ಕಾರ್ಯೋನ್ಮುಖವಾಗುವುದರೊಂದಿಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸಂಕಲ್ಪ ಮಾಡಿದೆ.

ಇ-ಆಫೀಸ್ ಅನುಷ್ಠಾನ: ಜನರಿಗೆ ಶೀಘ್ರ ಮತ್ತು ಸರಳ ಆಡಳಿತ ನೀಡಲು ಇ-ಆಫೀಸ್ ಸಹಕಾರಿಯಾಗಿದ್ದು, ಎಲ್ಲಾ ಕಡತಗಳನ್ನು ಇ-ಆಫೀಸ್ ಮೂಲಕವೇ ವಿಲೇವಾರಿ ಮಾಡಿ ಎಂಬುದು ಪ್ರಮುಖ ಯೋಜನೆಯಾಗಿದೆ. ಜಿಲ್ಲೆಯಾದ್ಯಂತ ಕಂದಾಯ ಕಚೇರಿಗಳಾದ ಜಿಲ್ಲಾಧಿಕಾರಿಗಳ ಕಚೇರಿ, ಸಹಾಯಕ ಅಯುಕ್ತರ ಕಚೇರಿ ಹಾಗೂ ಎಲ್ಲಾ ತಹಶೀಲ್ದಾರರುಗಳ ಕಚೇರಿಗಳಲ್ಲಿ ಶೇ.100ರಷ್ಟು ಇ-ಆಫೀಸ್ ಅನುಷ್ಠಾನಗೊಳಿಸಲಾಗಿದೆ. ಇ-ಆಫೀಸ್ ತಂತ್ರಾಂಶದ ಮೂಲಕ ಜಿಲ್ಲೆಯ ಕಂದಾಯ ಕಚೇರಿಗಳಲ್ಲಿ ಒಟ್ಟು 16,165 ಕಡತಗಳನ್ನು ಸೃಷ್ಟಿಸಿದ್ದು ಹಾಗೂ ಅಧೀನ ಇಲಾಖೆಯ ಇತರೆ ಇಲಾಖೆಗಳ 93,687 ಕಡತಗಳು ಸ್ವೀಕೃತಿಗೊಂಡಿವೆ. ಈ ಮೂಲಕ ಒಟ್ಟು 1,09,271 ಕಡತಗಳು ಈ ತಂತ್ರಾಂಶದಲ್ಲಿ ವಿಲೇವಾರಿಯಾಗಿದೆ.

ಭೂಮಿ ತಂತ್ರಾಂಶದಡಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಿನಿಂದ ಪ್ರಗತಿ ಸಾಧಿಸಿರುವ ಮ್ಯುಟೇಶನ್ ವಿವರಗಳು:ಭೂಮಿ ತಂತ್ರಾಂಶದಡಿ ಮ್ಯುಟೇಶನ್ ವಿಥ್‌ಔಟ್ ನೋಟೀಸ್ ಒನ್ ಡೇ ಅಡಿ 42,234 ಪ್ರಕರಣಗಳನ್ನು ವಿಲೇವಾರಿ ಮಾಡಿ, ಶೇ.99.64ರಷ್ಟು, ಮ್ಯುಟೇಶನ್ ವಿಥ್ ನೋಟೀಸ್ ಸೆವೆನ್ ಡೇಸ್ ಅಡಿ 8675 ಪ್ರಕರಣಗಳನ್ನು ವಿಲೇವಾರಿ ಮಾಡಿ, ಶೇ. 96.26ರಷ್ಟು ಹಾಗೂ ಮ್ಯುಟೇಶನ್ ವಿಥ್ ನೋಟೀಸ್ ಫಿಫ್‌ಟೀನ್ ಡೇಸ್ ಅಡಿ ಒಟ್ಟು 5141 ಪ್ರಕರಣಗಳನ್ನು ವಿಲೇವಾರಿ ಮಾಡಿ, ಶೇ. 91.16 ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ.

ಅಟಲ್ ಜನಸ್ನೇಹಿ ಕೇಂದ್ರ: ಸೇವಾಸಿಂಧು ಪೋರ್ಟಲ್‌ನಲ್ಲಿ ನಾಗರಿಕರಿಗೆ ಕಂದಾಯ ಸೇವೆಗಳನ್ನು ಪಡೆಯಲು ಒಂದು ವೇದಿಕೆಯನ್ನು ಒದಗಿಸಿದೆ. ಜಿಲ್ಲೆಯಾದ್ಯಂತ ಒಟ್ಟು 10 ಅಟಲ್ ಜೀ ಜನಸ್ನೇಹಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಎ.ಜೆ.ಎಸ್.ಕೆ ಅಡಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸ್ತವ್ಯ ದೃಢಪತ್ರ, ವಂಶವೃಕ್ಷ, ಪಿಂಚಣಿ, ಸಂಧ್ಯಾ ಸುರಕ್ಷ ಯೋಜನೆ, ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ಪಿಹೆಚ್‌ಪಿ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ಯೋಜನೆ, ಮೈತ್ರಿ, ಮನಸ್ವಿನಿ ಹಾಗೂ ಇತರೆ ಸೇವೆಗಳ ಪ್ರಯೋಜನವನ್ನು ಜನಸಾಮಾನ್ಯರು ಪಡೆದುಕೊಳ್ಳುತ್ತಿದ್ದಾರೆ. ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಒಟ್ಟು 76,870 ಅರ್ಜಿಗಳು ಸ್ವೀಕೃತವಾಗಿದ್ದು, 73,204 ಅರ್ಜಿಗಳನ್ನು ವಿಲೇವಾರಿ ಮಾಡಿ, ಶೇ. 95.23 ಸಾಧನೆ ಮಾಡಲಾಗಿದೆ.

ಕಂದಾಯ ನ್ಯಾಯಾಲಯದ ಕಡತ ವಿಲೇವಾರಿ: ಕರ್ನಾಟಕ ಭೂಕಂದಾಯ ಕಾಯ್ದೆ ಅಡಿಯಲ್ಲಿ ಸಾರ್ವಜನಿಕರು ಹಾಗೂ ರೈತರಿಗೆ ಮೇಲ್ಮನವಿ ಅಥವಾ ಪುನರ್ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಒಟ್ಟು 154 ಪ್ರಕರಣಗಳು ಮತ್ತು ಕುಂದಾಪುರ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಒಟ್ಟು 765 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.

ಪೈಕಿ ಆರ್‌ಟಿಸಿ ವಿಲೇವಾರಿ: ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಒಟ್ಟು 11,074 ಪೈಕಿ ಆರ್‌ಟಿಸಿ ಪ್ರಕರಣಗಳನ್ನು ಹಾಗೂ ಭೂಮಿ ತಂತ್ರಾಂಶದ ಮೂಲಕ ಒಟ್ಟು 84,407 ಪ್ಲಾಟ್‌ಗಳನ್ನು ಪ್ಲ್ಯಾಗ್ ಮಾಡಿರುವುದಾಗಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X