ಸ್ಕೂಟರ್‌ಗಳ ಮಧ್ಯೆ ಅಪಘಾತ: ಓರ್ವ ಸವಾರ ಮೃತ್ಯು

ಬೈಂದೂರು : ನಾವುಂದ ಗ್ರಾಮದ ಮಸ್ಕಿ ಮಹಾಗಣಪತಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಸ್ಕೂಟರ್‌ಗಳ ಮಧ್ಯೆ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕೆ.ಹಮ್ಮಿದ್ ಎಂದು ಗುರುತಿಸಲಾಗಿದೆ. ಇವರು ಜುಪಿಟರ್ ಸ್ಕೂಟರ್‌ನಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದು, ಈ ವೇಳೆ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ನಾಗರಾಜ್ ಎಂಬವರ ಸ್ಕೂಟರ್ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಇಬ್ಬರೂ ಸವಾರರು ರಸ್ತೆಗೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಹಮ್ಮಿದ್ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ತೀವ್ರವಾಗಿ ಗಾಯ ಗೊಂಡ ನಾಗರಾಜ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರಹೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





