Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರ್ಯಾಯ ಮಹೋತ್ಸವಕ್ಕೆ ಬರುವ ಭಕ್ತರಿಗೆ...

ಪರ್ಯಾಯ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಉಡುಪಿ ಡಾ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ1 Dec 2023 8:08 PM IST
share
ಪರ್ಯಾಯ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಉಡುಪಿ ಡಾ.ವಿದ್ಯಾಕುಮಾರಿ

ಉಡುಪಿ, ಡಿ.1: ಮುಂದಿನ ಜನವರಿ ತಿಂಗಳಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

2024ರ ಜನವರಿ 8ರಿಂದ 18ರವರೆಗೆ ಈ ಬಾರಿ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮವು ನಡೆಯ ಲಿದ್ದು, ಇದಕ್ಕೆ ರಾಜ್ಯದ ವಿವಿಧ ಭಾಗಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು, ಅಭಿಮಾನಿಗಳು ಆಗಮಿಸಲಿದ್ದು, ಜನಸಂದಣಿ ನಗರದಲ್ಲಿ ಹೆಚ್ಚಲಿದೆ. ಹೀಗಾಗಿ ನಗರದ ಸ್ವಚ್ಛತೆ, ನೈರ್ಮಲ್ಯ, ರಸ್ತೆಗಳ ಸುಸ್ಥಿತಿ, ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಸುಗಮ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಕಾಮಗಾರಿ ಗಳನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳಬೇಕು. ಮೊಬೈಲ್ ಶೌಚಾಲಯಗಳನ್ನು ಅಲ್ಲಲ್ಲಿ ನಿರ್ಮಿಸಬೇಕು ಎಂದ ಅವರು, ನಗರದಲ್ಲಿ ಶುಚಿತ್ವಕ್ಕೆ ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಬೇಕೆಂದರು.

ಪೊಲೀಸ್ ಇಲಾಖೆಯವರು ಬಂದೋಬಸ್ತ್‌ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಾಹನಗಳ ಸುಗಮ ಸಂಚಾರಕ್ಕೆ, ಅವುಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕು. ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಕೃಷ ಮಠದ ಆವರಣದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ಆರೋಗ್ಯ ಕೇಂದ್ರಗಳನ್ನು ತಾತ್ಕಾಲಿಕ ವಾಗಿ ತೆರೆಯಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ವಿವಿಧೆಡೆಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೆಎಸ್ಸಾರ್ಟಿಸಿ ವಿಶೇಷ ವಾಹನಗಳ ಸೌಲಭ್ಯವನ್ನು ಕಲ್ಪಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅಗತ್ಯ ವಿರುವ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕೆಂದು ಸೂಚನೆ ನೀಡಿದ ಅವರು, ಪ್ರತಿಯೊಂದು ವ್ಯವಸ್ಥೆಯ ಮೇಲುಸ್ತುವಾರಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚಿಸಿದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಜನವರಿ 8ರಿಂದ 18ರವರೆಗೆ ಪ್ರತಿದಿನ ಸಾವಿರಾರು ಭಕ್ತಾಧಿಗಳು ನಗರಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಕಾರ್ಯಕ್ರಮದ ಯಶಸ್ಸಿಗೆ ಸ್ಥಳೀಯ ನಗರಾಡಳಿತ ಹಾಗೂ ಜಿಲ್ಲಾಡಳಿತ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವುದರೊಂದಿಗೆ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು. ಅಗ್ನಿಶಾಮಕ ಹೆಚ್ಚುವರಿ ವಾಹನಗಳನ್ನು ಪಕ್ಕದ ಜಿಲ್ಲೆಯಿಂದ ತರಿಸಿಕೊಳ್ಳಬೇಕು ಎಂದ ಅವರು, ಮೆರವಣಿಗೆಯಲ್ಲಿ ಸರಕಾರದ ವಿವಿಧ ಯೋಜನೆಗಳ ಪ್ರಚಾರ ಪಡಿಸುವ ಟ್ಯಾಬ್ಲೋಗಳು ಭಾಗವಹಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿವೈಎಸ್‌ಪಿ ದಿನಕರ್, ನಗರಾಭಿವೃದ್ಧಿ ಕೋಶದ ಅಭಿಯಂತರ ಮೋಹನ್ ರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು, ಮಠದ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X