ವಿದ್ಯಾರ್ಥಿ ವೇತನ: ಅವಧಿ ವಿಸ್ತರಣೆ

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 1ನೇ ತರಗತಿಯಿಂದ 8ನೇ ತರಗತಿ ಯವರೆಗೆ ಕಲಿಯು ತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಇಲಾಖೆ ವೆಬ್‌ಸೈಟ್ -https://ssp.karnataka.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 8ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ - https://dom.karnataka.gov.in-, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





