ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು

ಉಡುಪಿ, ಡಿ.2: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.
ಸಂತೆಕಟ್ಟೆಯ ಸೋಲಾಂಗೆ ಸ್ಮೀತ ಲೂಯಿಸ್ ಎಂಬವರು ಅ.6ರಂದು ಮುಂಬೈಗೆ ಹೋಗಿದ್ದು, ನ.29ರಂದು ವಾಪಾಸ್ಸು ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಮನೆಯಲ್ಲಿರುವ 1,13,800ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರವುದಾಗಿ ದೂರಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





