Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರಿ ಕಚೇರಿಯಲ್ಲಿನ ನೇಮಕಾತಿಯಲ್ಲಿ...

ಸರಕಾರಿ ಕಚೇರಿಯಲ್ಲಿನ ನೇಮಕಾತಿಯಲ್ಲಿ ವಿಕಲಚೇತನರಿಗೆ ಆದ್ಯತೆ ಅಗತ್ಯ: ಜಯಪ್ರಕಾಶ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ3 Dec 2023 8:23 PM IST
share
ಸರಕಾರಿ ಕಚೇರಿಯಲ್ಲಿನ ನೇಮಕಾತಿಯಲ್ಲಿ ವಿಕಲಚೇತನರಿಗೆ ಆದ್ಯತೆ ಅಗತ್ಯ: ಜಯಪ್ರಕಾಶ್ ಹೆಗ್ಡೆ

ಉಡುಪಿ, ಡಿ.3: ವಿಕಲಚೇತನರ ಸಮಸ್ಯೆ ಹಾಗೂ ಬೇಡಿಕೆಗಳಿಗೆ ಯಾವುದೇ ವಿಳಂಬವಿಲ್ಲದೆ ಸ್ಪಂದಿಸುವ ಕಾರ್ಯ ನಡೆಯ ಬೇಕು. ಸರಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಾಗ ಅರ್ಹತೆ ಹೊಂದಿರುವ ವಿಶೇಷ ಚೇತನರಿಗೆ ಆದ್ಯತೆ ನೀಡಿ, ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿ ರುವ ಸ್ವಯಂಸೇವಾ ಸಂಸ್ಥೆಗಳು, ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದ ಮಿನಿಹಾಲ್‌ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಮಾಜದಲ್ಲಿ ಶಕ್ತರಿಗೆ ಸಹಕರಿಸುವ ಬದಲು ಅಶಕ್ತರಾದ ವಿಕಲಚೇತನರಿಗೆ ಸಹಕರಿಸಿ ಅವರುಗಳಲ್ಲಿ ಶಕ್ತಿ ತುಂಬಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಜನಸಾಮಾನ್ಯರಿಗೆ ಅತ್ಯವಶ್ಯಕತೆಗಳಾದ ಶಿಕ್ಷಣ, ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸದನಗಳಲ್ಲಿ ಹೆಚ್ಚು ಚರ್ಚೆಯಾಗುವುದರೊಂದಿಗೆ ,ಉತ್ತಮ ಯೋಜನೆಗಳು ಹಾಗೂ ಕಾರ್ಯಕ್ರಮ ಗಳನ್ನು ಜಾರಿಗೆ ತಂದು ಜನೋಪಯೋಗಿ ಕಾರ್ಯಗಳನ್ನು ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಮಾತನಾಡಿ, ವಿಶೇಷ ಚೇತನರ ಮೇಲೆ ಅನುಕಂಪ ಬೇಡ. ಅವರಿಗೆ ಅವಕಾಶ ಕಲ್ಪಿಸುವ ಜವಾಬ್ದಾರಿ ತಂದೆ ತಾಯಿಗಳು, ಸರಕಾರ ಸೇರಿದಂತೆ ಸಮಾಜದ ಪ್ರತಿಯೊಬ್ಬರ ಮೇಲಿದೆ. ವಿಶೇಷ ಚೇತನರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಮಾಡಿದಾಗ ಅವರು ಸಾಧನೆ ಮಾಡಲು ಸಾಧ್ಯ. ವಿಶೇಷ ಚೇತನರು ಸದಾ ಕಾರ್ಯ ಚಟುವಟಿಕೆಯಿಂದ ಇರಲು ಪ್ರತಿಯೊಬ್ಬ ಪೋಷಕರು ತಾಳ್ಮೆಯಿಂದ ಸಹಕರಿಸಬೇಕು. ಅವರಲ್ಲಿರುವ ಪ್ರತಿಭೆ ಯನ್ನು ಗುರುತಿಸುವ ಕೆಲಸವಾಗಬೇಕು ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ, ವಿಕಲಚೇತನರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಎಲ್ಲರ ಸಹಕಾರ ಅವಶ್ಯಕತೆಯಿದ್ದು, ಅದಕ್ಕೆ ಸ್ಪಂದನೆ ಅತೀ ಅಗತ್ಯವಾಗಿದೆ. ಮುಂಬರುವ ಬಜೆಟ್‌ನಲ್ಲಿ ವಿಕಲಚೇತನರಿಗೆ ಪ್ರತ್ಯೇಕ ಬಜೆಟ್ ಅನ್ನು ಮಂಡಿಸಲು ಸರಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ವಿಕಲಚೇತನರ ಪುನರ್ವಸತಿಗೆ ಇಲಾಖೆಯ ಯೋಜನೆಗಳ ಕುರಿತು ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಎಂ.ಭಟ್ ಮಾಹಿತಿ ನೀಡಿದರು. ವಿಕಲ ಚೇತನರಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾಧ್, ಆ್ಯಗ್ನೆಸ್ ಕುಂದರ್ ಮೊದ ಲಾದವರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಯಶ್ರೀ ಕಾರ್ಯಕ್ರಮ ನಿರೂಪಿಸಿ, ವಿಕಲಚೇತನರ ಕಲ್ಯಾಣಾಧಿಕಾರಿ ರತ್ನ ವಂದಿಸಿದರು. ವಿಶೇಷ ಶಾಲಾ ಮಕ್ಕಳು ಸಿದ್ಧಪಡಿಸಿದ ಕರಕುಶಲ ವಸ್ತು ಪ್ರದರ್ಶನ ಮತ್ತು ವಿಶೇಷ ಶಾಲಾ ಮಕ್ಕಳು ಹಾಗೂ ವಿಕಲಚೇತನರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X