ಉದ್ಯಾವರ: ಭಾತೃತ್ವ ಮತ್ತು ಐಕ್ಯತೆಯ ರವಿವಾರ ಆಚರಣೆ

ಉಡುಪಿ, ಡಿ.4: ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾ ಲಯದ ವಾರ್ಷಿಕ ಮಹೋತ್ಸವದ ಪೂರ್ವಭಾವಿಯಾಗಿ ಭಾತೃತ್ವ ಮತ್ತು ಐಕ್ಯತೆಯ ರವಿವಾರವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪ್ರಧಾನ ಬಲಿ ಪೂಜೆಯ ನೇತೃತ್ವ ವಹಿಸಿದ್ದ ಜೆಪ್ಪು ಸೆಮಿನರಿಯ ಪ್ರಾಧ್ಯಾಪಕ ವಂ.ಫಾ.ಡಾ.ರಾಜೇಶ್ ರೊಜಾರಿಯೋ ಪವಿತ್ರ ಬಲಿ ಪೂಜೆಯನ್ನು ನೆರವೇರಿಸಿ ಸಂದೇಶ ನೀಡಿದರು. ’ಕ್ರಿಸ್ತರು ಮನುಷ್ಯ ಜನ್ಮ ತಾಳಿ ಭೂಲೋಕಕ್ಕೆ ಬಂದು ಮನುಷ್ಯತ್ವ ಕಾಪಾಡಿಕೊಂಡು ದೇವರ ಪ್ರತಿಬಿಂಬವಾಗಿ ಜೀವಿಸಿದರು. ಅವರಂತೆಯೇ ನಾವು ಕೂಡ ದೇವರ ಪ್ರತಿಬಿಂಬ ವಾಗಿ ಬಾಳಿ ತೋರಿಸಬೇಕು. ಇದೇ ನಾವು ಕ್ರಿಸ್ತನಿಗೆ ಕೊಡುವ ಅತ್ಯುನ್ನತ ಕೊಡುಗೆ’ ಎಂದರು.
ಪವಿತ್ರ ಬಲಿಪೂಜೆಯ ಬಳಿಕ ಪರಮ ಪ್ರಸಾದದ ಆರಾಧನೆಯನ್ನು ಪ್ರಧಾನ ಧರ್ಮಗುರುಗಳು ನೆರವೇರಿಸಿದರು. ವಿಶೇಷ ಅಲಂಕೃತ ವಾಹನದಲ್ಲಿ ಪರಮ ಪ್ರಸಾದದ ಭವ್ಯ ಮತ್ತು ಭಕ್ತಿಪೂರ್ವಕ ಮೆರವಣಿಗೆ ನಡೆಯಿತು.
ದೇವಾಲಯದ ಪ್ರಧಾನ ಧರ್ಮಗುರು ವಂ.ಫಾ.ಸ್ಟ್ಯಾನಿ ಬಿ.ಲೋಬೊ ಮತ್ತು ಸಹಾಯಕ ಧರ್ಮಗುರು ವಂ.ಲಿಯೋ ಪ್ರವೀಣ್ ಡಿಸೋಜ, ಧರ್ಮಭಗಿನಿ ಯರು ಮತ್ತು ಸಾವಿರಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸಿದ್ದರು.







