ಅಂಬೇಡ್ಕರ್ ಪ್ರತಿಮೆಗೆ ಉಡುಪಿ ಜಿಲ್ಲಾಡಳಿತದಿಂದ ಮಾಲಾರ್ಪಣೆ

ಉಡುಪಿ, ಡಿ.6: ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ. ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಡಾ.ಅರುಣ್ ಕೆ. ಹಾಗೂ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ. ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಶಂಕರ್ ಉಪಸ್ಥಿತರಿದ್ದು ಪುತ್ಥಳಿಗೆ ಮಾರ್ಲಾಪಣೆ ಮಾಡಿದರು.
Next Story





