ಎಪಿಡೆಮಿಯಾಲಜಿಸ್ಟ್ ಹುದ್ದೆಗೆ ನೇರ ಸಂದರ್ಶನ

ಉಡುಪಿ, ಡಿ.6: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾ ಘಟಕದ ಐಡಿಎಸ್‌ಪಿ ಕಾರ್ಯಕ್ರಮದಲ್ಲಿ ಕುಂದಾಪುರದ ಸಾರ್ವಜನಿಕ ಆರೋಗ್ಯ ಘಟಕಕ್ಕೆ ಅಗತ್ಯವಿರುವ ಎಪಿಡೆಮಿಯಾಲಜಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಡಿಸೆಂಬರ್ 11ರಂದು ಬೆಳಗ್ಗೆ 10:30ರಿಂದ ಮಧ್ಯಾಹ್ನ 1:30ರವರೆಗೆ ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಮೆಡಿಕಲ್ ಪದವಿಯೊಂದಿಗೆ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಇನ್ ಪ್ರಿವೆಂಟೀವ್ ಅಂಡ್ ಸೋಷಿಯಲ್ ಮೆಡಿಸಿನ್/ ಪಬ್ಲಿಕ್ ಹೆಲ್ತ್, ಎಪಿಡೆಮಿಯೋಲಾಜಿ ಅಥವಾ ಯಾವುದೇ ಮೆಡಿಕಲ್ ಪದವಿಯೊಂದಿಗೆ ಪಬ್ಲಿಕ್ ಹೆಲ್ತ್‌ನಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





