ವೃದ್ಧ ನಾಪತ್ತೆ

ಉಡುಪಿ, ಡಿ.6: ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಾಪು ಪಡು ಗ್ರಾಮದ ನಿವಾಸಿ ರಮೇಶ್ ವಿ. ಮೆಂಡನ್ (76) ಎಂಬವರು ನ.25ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆ ಯಾಗಿದ್ದಾರೆ.
5 ಅಡಿ 8 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ:08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ. ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದು ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





