ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ

ಉಡುಪಿ, ಡಿ.7: ಉಡುಪಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಮಲಬಾರ್ ಗೋಲ್ಡ್ ಡೈಮಂಡ್ಸ್ ಉಡುಪಿ ಇವರ ಸಹಯೋಗದೊಂದಿಗೆ ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ ವಹಿಸಿದ್ದರು. ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ ದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ 5 ಮಕ್ಕಳನ್ನು ಸನ್ಮಾನಿಸಲಾಯಿತು. ಉಡುಪಿ ನಗರಸಭೆಯ ಇಂಜಿನಿಯರ್ ದಿವಾಕರ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನವನ್ನು ನೀಡಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಉಷಾ ಕಿರಣ್, ನಿವೃತ್ತ ಬಿಐಇಆರ್‌ಟಿ ಗಂಗೆ ಶಾನುಭಾಗ್, ಕೆಎಂಸಿಯ ಅಕ್ಯುಪೇಶನ್ ಥೆರಪಿಸ್ಟ್ ಡಾ.ಕೇಶವ ರಾಮ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಸಿಸ್ಟೆಂಟ್ ಮಾರ್ಕೆಟಿಂಗ್ ಮ್ಯಾನೇಜರ್ ತಂಝೀಮ್ ಶಿರ್ವ ಉಪಸ್ಥಿತರಿದ್ದರು.
ಬಿಆರ್‌ಪಿ ಮೀನಾ ಸ್ವಾಗತಿಸಿದರು. ಉಷಾ ವಂದಿಸಿದರು. ಸುನಿತಾ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವಿಶೇಷ ಚೇತನ ಮಕ್ಕಳು ತಮ್ಮ ಪ್ರತಿಭಾ ಪ್ರದರ್ಶನವನ್ನು ನೀಡಿದರು.







