Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಕಸಿತ ಭಾರತದ ನಿರ್ಮಾಣ ಎಲ್ಲರ...

ವಿಕಸಿತ ಭಾರತದ ನಿರ್ಮಾಣ ಎಲ್ಲರ ಜವಾಬ್ದಾರಿ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ9 Dec 2023 9:24 PM IST
share
ವಿಕಸಿತ ಭಾರತದ ನಿರ್ಮಾಣ ಎಲ್ಲರ ಜವಾಬ್ದಾರಿ: ಶೋಭಾ ಕರಂದ್ಲಾಜೆ

ಉಡುಪಿ, ಡಿ.9: ಸರಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರಿಗೆ ಸರಕಾರದ ಸೇವೆಗಳನ್ನು ಅವರ ಮನೆ ಬಾಗಿಲಲ್ಲಿ ಒದಗಿಸುವುದು, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಅವರು ಇಂದು ಉಡುಪಿಯ ತೋನ್ಸೆಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ವಾಹನ ಆಗಮಿಸಿದಾಗ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ 2047ರ ಹೊತ್ತಿಗೆ ಭಾರತವನ್ನು ಜಗತ್ತಿನ ದೊಡ್ಡಣ್ಣನಾಗಿ ಮಾಡುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ. ಇದು ಪಕ್ಷಾತೀತ ಕಾರ್ಯಕ್ರಮ. ಎಲ್ಲರ ಸಹಕಾರದೊಂದಿಗೆ ಯೋಜನೆ ಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯ, ಎಲ್ಲರೂ ಅವರವರ ಜವಾಬ್ದಾರಿ ನಿರ್ವಹಿಸಿದರೆ ದೇಶದ ಅಭಿವೃದ್ಧಿ ಯಾಗುತ್ತದೆ. 2047ರಲ್ಲಿ ಭಾರತ ವಿಕಸಿತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಡವರಿಗೆ ದುರ್ಬಲರಿಗೆ ಯೋಜನೆ ಗಳು ತಲುಪುವಂತೆ ಮಾಡುವುದು ಎಲ್ಲರ ಜವಾಬ್ದಾರಿ. ಸ್ವನಿಧಿ ಯೋಜನೆ, ವಿಶ್ವಕರ್ಮ ಯೋಜನೆ ಮುಂತಾದ ಜನಪರ ಕಾರ್ಯಕ್ರಮಗಳು ಮನೆಮನೆಗೆ ತಲುಪಬೇಕು ಎಂದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ಮಾತನಾಡಿ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳನ್ನು ಪಕ್ಷಾತೀತವಾಗಿ ತಲುಪಿಸು ವುದು ನಮ್ಮ ಆದ್ಯತೆ ಯಾಗಬೇಕು. ವಿಕಸಿತ ಭಾರತ ಸಂಕಲ್ಪ ಯಾತ್ರೆ ಈವರೆಗೆ ಯೋಜನೆಗಳು ತಲುಪದೇ ಇದ್ದವರನ್ನು ತಲುಪುತ್ತಿದೆ ಎಂದು ಹೇಳಿದರು.

ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ತೋನ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮ, ಉಪಾಧ್ಯಕ್ಷ ಅರುಣ್, ಕೆನರಾ ಬ್ಯಾಂಕಿನ ಪ್ರಾದೇಶಿಕ ಪ್ರಬಂಧಕಿ ಶೀಲಾ ಸಾಜನ್, ದೂರದರ್ಶನದ ಉಪನಿರ್ದೇಶಕ (ಸುದ್ದಿ) ಯಶವಂತ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ.ಧನಂಜಯ್ ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಫಲಾನುಭವಿಗಳೊಂದಿಗೆ ನಡೆಸಿದ ಸಂವಾದದ ನೇರ ಪ್ರಸಾರ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಕಸಿತ ಭಾರತ ಸಂಕಲ್ಪ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು. ವಿವಿಧ ಯೋಜನೆಗಳ ಫಲಾನುಭವಿ ಗಳಿಗೆ ಆದೇಶ ಪತ್ರಗಳನ್ನು ಸ್ಥಳದಲ್ಲಿಯೇ ನೀಡಲಾಯಿತು.

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಕೀಟನಾಶಕ ಹಾಗೂ ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆಗೆ ಡ್ರೋನ್ ಬಳಕೆಯ ಕುರಿತ ಪ್ರಾತ್ಯಕ್ಷಿಕೆ ಯನ್ನು ಪ್ರದರ್ಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X