ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ

ಉಡುಪಿ, ಡಿ.11: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಇವರ ಸಹಯೋಗದೊಂದಿಗೆ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ಡಿ.12ರಂದು ಬೆಳಗ್ಗೆ 11 ಗಂಟೆಗೆ ಕೋಟ ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸುನೀತ ವಿ. ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಪ್ರಾಂಶುಪಾಲ ಹಾಗೂ ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಲಿದ್ದಾರೆ. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಂಕರ್ ನಾಯ್ಕ್, ಐಕ್ಯೂಎಸಿ ಸಂಚಾಲಕ ಡಾ. ಸುಬ್ರಹ್ಮಣ್ಯ ಎ., ಪ್ರಾಧ್ಯಾಪಕ ಮುರಳಿ ಎಂ. ಜಿ. ಮತ್ತಿತರರು ಭಾಗವಹಿಸಲಿದ್ದಾರೆ.
ಅಂಬೇಡ್ಕರ್ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





