ಹೆರಿಗೆ ತಜ್ಞರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಡಿ.11: ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಹೆರಿಗೆ ತಜ್ಞರು-01 ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





