Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ, ಮರವಂತೆ, ಕಾಪು, ತ್ರಾಸಿ...

ಮಲ್ಪೆ, ಮರವಂತೆ, ಕಾಪು, ತ್ರಾಸಿ ಬೀಚ್‌ಗಳಲ್ಲಿ ಜೀವರಕ್ಷಕರ ನೇಮಕ: ಡಿಸಿ ಡಾ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ16 Dec 2023 7:23 PM IST
share
ಮಲ್ಪೆ, ಮರವಂತೆ, ಕಾಪು, ತ್ರಾಸಿ ಬೀಚ್‌ಗಳಲ್ಲಿ ಜೀವರಕ್ಷಕರ ನೇಮಕ: ಡಿಸಿ ಡಾ.ವಿದ್ಯಾಕುಮಾರಿ

ಉಡುಪಿ: ಕಡಲ ತೀರದ ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜೀವರಕ್ಷಕರನ್ನು ಮಲ್ಪೆ, ಮರ ವಂತೆ, ಕಾಪು, ತ್ರಾಸಿ ಬೀಚ್‌ಗಳಲ್ಲಿ ನೇಮಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಶನಿವಾರ ಮಲ್ಪೆಯ ಕಡಲತೀರದಲ್ಲಿ ಜೀವ ರಕ್ಷಕ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಈ ನಿಟ್ಟಿನಲ್ಲಿ ಈಗಾಗಲೇ ಮೊದಲ ಹಂತದಲ್ಲಿ 17 ಜನ ಜೀವರಕ್ಷಕರಿಗೆ ತರಬೇತಿಯನ್ನು ನೀಡಲಾಗಿದ್ದು, ತಮ್ಮ ಕಾರ್ಯಕ್ಕೆ ಇವರು ಶೀಘ್ರದಲ್ಲಿಯೇ ನಿಯೋಜನೆಗೊಳ್ಳಲಿದ್ದಾರೆ ಎಂದರು.

ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾಡಳಿತದ್ದಾಗಿದೆ ಎಂದ ಅವರು, ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಇದೀಗ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶಪಾಲ್ ಸುವರ್ಣ ಅವರು ಮಾತನಾಡಿ, ಕಡಲ ತೀರದ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆಯ ಕಾರ್ಯವನ್ನು ಜೀವರಕ್ಷಕ ತಂಡದವರು ಮಾಡಲಿದ್ದು, ಇದರಿಂದ ಭವಿಷ್ಯದಲ್ಲಾಗುವ ಅಹಿತಕರ ಘಟನೆಗಳನ್ನು ತಡೆಯಲು ಸಾಧ್ಯವಾಗಲಿದೆ ಎಂದರು.

ಕಡಲ ಸೊಬಗನ್ನು ಸವಿಯಲು ಹೊರಗಿನಿಂದ ಬರುವ ಜನರಿಗೆ ಸಮುದ್ರ ಪ್ರದೇಶದ ಆಳ, ಅಗಲ, ಅಲೆಗಳ ಹೊಡೆತಗಳನ್ನು ತಪ್ಪಿಸಿಕೊಳ್ಳುವ ಬಗ್ಗೆ ಅರಿವಿಲ್ಲದೇ ಅನಾಹುತಗಳು ಸಂಭವಿಸುತ್ತದೆ. ಇವುಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ನುರಿತ ಹಾಗೂ ಪರಿಣಿತ ಜೀವ ರಕ್ಷಕ ಸಿಬ್ಬಂದಿ ಗಳನ್ನು ನಿಯೋಜನೆ ಮಾಡಿರುವುದು ಒಂದು ಅಭಿನಂದನೀಯ ಕಾರ್ಯ ಎಂದರು.

ದೇಶದಲ್ಲಿಯೇ ಮಲ್ಪೆ ಬೀಚ್ ಅತ್ಯಾಕರ್ಷಣೀಯವಾಗಿದ್ದು, ಪ್ರವಾಸಿಗ ರನ್ನು ಆಕರ್ಷಿಸುತ್ತಿದೆ. ದಿನೇ ದಿನೇ ಇಲ್ಲಿಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯ ಗಳನ್ನೊಳಗೊಂಡ ಬೀಚ್‌ನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ನಗರಸಭೆ ಪೌರಾಯುಕ್ತ ರಾಯಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಲೈಫ್‌ಸೇವಿಂಗ್ಸ್ ಸೊಸೈಟಿಯಿಂದ ಮಾನ್ಯತೆ ಪಡೆದ ಪುತ್ತೂರಿನ ವಾರಾಣಾಸಿ ಡೆವಲಪ್‌ಮೆಂಟ್ ಅಂಡ್ ರಿಸರ್ಚ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಜೀವರಕ್ಷಕ ತಂಡದವರಿಗೆ ಉತ್ತಮ ಈಜುಗಾರಿಕೆ, ಕೃತಕ ಉಸಿರಾಟ ನೀಡುವುದು, ಪ್ರಥಮಚಿಕಿತ್ಸೆ ನೀಡುವುದು, ಪ್ರಜ್ಞಾಹೀನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವುದು ಸೇರಿದಂತೆ ವಿವಿಧ ಅಗತ್ಯ ತರಬೇತಿ ಯನ್ನು ಈಗಾಗಲೇ ನೀಡಿದ್ದು, ಪ್ರಮಾಣಪತ್ರಗಳನ್ನು ಇಂದು ವಿತರಿಸಲಾಯಿತು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X