Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗರಡಿಗಳಿಗೆ ಮಹಿಳೆಯರು ಅಸ್ಪೃಶ್ಯರಾದ...

ಗರಡಿಗಳಿಗೆ ಮಹಿಳೆಯರು ಅಸ್ಪೃಶ್ಯರಾದ ಬಗ್ಗೆ ಅಧ್ಯಯನ ಅಗತ್ಯ: ಹಿರಿಯ ಸಾಹಿತಿ ರೋಹಿಣಿ ಬಿ.ಎಂ.

ವಾರ್ತಾಭಾರತಿವಾರ್ತಾಭಾರತಿ17 Dec 2023 7:05 PM IST
share
ಗರಡಿಗಳಿಗೆ ಮಹಿಳೆಯರು ಅಸ್ಪೃಶ್ಯರಾದ ಬಗ್ಗೆ ಅಧ್ಯಯನ ಅಗತ್ಯ: ಹಿರಿಯ ಸಾಹಿತಿ ರೋಹಿಣಿ ಬಿ.ಎಂ.

ಉಡುಪಿ, ಡಿ.17: ತುಳುನಾಡಿನಲ್ಲಿ ಸಾವಿರಾರು ದೈವಗಳಿವೆ. ಆದರೆ ಕೆಲವು ದೈವಸ್ಥಾನಗಳಿಗೆ ಸ್ತ್ರೀಯರಿಗೆ ಪ್ರವೇಶ ಇಲ್ಲ. ಅಲ್ಲಿ ಸ್ತ್ರೀದೈವ ಇದ್ದರೂ ಕೂಡ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ. ಇದು ಯಾವಾಗ ಪಾರಂಭವಾಯಿತು ಮತ್ತು ಮಹಿಳೆಯರು ಯಾಕಾಗಿ ಹಾಗೂ ಯಾವ ಕಾರಣಕ್ಕೆ ಅಸ್ಪೃಶ್ಯರಾದರು ಎಂಬುದರ ಬಗ್ಗೆ ಸಂಶೋಧನೆ ನಡೆಸಬೇಕು ಎಂದು ಹಿರಿಯ ಸಾಹಿತಿ ರೋಹಿಣಿ ಬಿ.ಎಂ. ಹೇಳಿದ್ದಾರೆ.

ಬನ್ನಂಜೆ ಬಾಬು ಅಮೀನ್- 80 ಅಭಿನಂದನಾ ಸಮಿತಿ ವತಿಯಿಂದ ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾದ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರ 80ರ ಸಂಭ್ರಮ ‘ಸಿರಿತುಪ್ಪೆ’ ಸಮಾರಂಭದಲ್ಲಿ ಅವರ ‘ತುಳುನಾಡ ಸುತ್ತ ಮುತ್ತ’ ಹಾಗೂ ‘ಗರೋಡಿ ಒಂದು ಚಿಂತನೆ’ ಪುಸ್ತಕಗಳನ್ನು ಅನಾವರಣಗೊಳಿಸಿ ರೋಹಿಣಿ ಬಿ.ಎಂ. ಮಾತನಾಡುತ್ತಿದ್ದರು.

ತುಳುನಾಡಿನಲ್ಲಿ ಸ್ತ್ರೀ ದೈವಗಳನ್ನು ಆರಾಧನೆ ಮಾಡಲಾಗುತ್ತದೆ. ಮಾತೃ ಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣಿಗೆ ಎಲ್ಲ ರೀತಿಯ ಹಕ್ಕು ನೀಡಲಾಗಿದೆ. ಆದರೆ ಅದರ ನಿಯಂತ್ರಣ ಯಾರ ಕೈಯಲ್ಲಿ ಇರುವುದು ಎಂಬುದನ್ನು ಕೂಡ ನಾವು ಯೋಚನೆ ಮಾಡಬೇಕು. ಸ್ತ್ರೀ ದೈವಗಳು ಇಂದು ಬದಲಾಗುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗರಡಿಗಳಲ್ಲಿ ಕನ್ನಡಿ ಇಟ್ಟುಕೊಂಡು ನಿಂತ ಮಾಸ್ತಿ ಶಿಲ್ಪ ಗಳಿವೆ. ಮಾಸ್ತಿ ಅಂದರೆ ಪತಿ ಸತ್ತಾಗ ಪತ್ನಿ ಚಿತೆಗೆ ಹಾರಿ ಪ್ರಾಣ ಬಿಡುವುದು. ಅಂತಹ ಶಿಲ್ಪಗಳು ನಮ್ಮ ಗರಡಿಗಳಲ್ಲಿ ಇರಲು ಸಾಧ್ಯವೇ ಇಲ್ಲ. ಯಾಕೆಂದರೆ ನಮ್ಮಲ್ಲಿ ವಿಧವೆಗೂ ಮದುವೆ ಯಾಗುವ ಅವಕಾಶ ಇದೆ. ಈ ಶಿಲ್ಪಗಳು ಯುದ್ಧದಲ್ಲಿ ಹೋರಾಡಿ ಗೆದ್ದ ಮಹಿಳೆಯರದ್ದು ಆಗಿರಬಹುದು. ಅದೇ ರೀತಿ ಯೋಧರನ್ನು ಸಿದ್ಧಪಡಿಸುವ ಗರಡಿಯಲ್ಲಿ ಹಿಂದೆ ಮಹಿಳೆಯರಿಗೆ ಪ್ರವೇಶ ಇತ್ತೇ ಎಂಬುದು ಕೂಡ ಪ್ರಶ್ನೆಯಾಗಿದೆ. ಆ ಕಾಲದಲ್ಲಿ ಮಹಿಳೆಯರು ಕೂಡ ಯೋಧರಾಗಿದ್ದರೇ ಎಂಬುದರ ಬಗ್ಗೆ ಅಧ್ಯಯನ ನಡೆಯಬೇಕಾಗಿದೆ ಎಂದರು.

ಜನಪದ ಸಂಸ್ಕೃತಿಯು ನಿಂತ ನೀರಾಗಿಲ್ಲ. ನಮ್ಮಲ್ಲಿರುವ ಎಲ್ಲ ಸಂಸ್ಕೃತಿಯನ್ನು ಸಮಾನವಾಗಿ ನೋಡಲು ಅಗತ್ಯ ಇಲ್ಲ. ತುಳು ಹಾಗೂ ಬ್ರಾಹ್ಮಣ ಸಂಸ್ಕೃತಿ ಬೇರೆ ಬೇರೆ ಆಗಿದೆ. ಹೀಗೆ ನಮ್ಮದು ಬಹು ಸಂಸ್ಕೃತಿ ಮತ್ತು ಬಹು ಭಾಷೆಗಳ ನಾಡು. ಬನ್ನಂಜೆ ಬಾಬು ಅಮೀನ್ ತುಳುನಾಡಿನ ತುಳು ಸಂಸ್ಕೃತಿಯನ್ನು ಅಧ್ಯಯನಪೂರ್ಣವಾಗಿ ಕಟ್ಟುಕೊಟ್ಟಿದ್ದಾರೆ. ಇದನ್ನು ಮುಂದಿನ ತಲೆಮಾರಿಗೆ ಉಳಿಸಿಕೊಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಟಿ ಟ್ರಸ್ಟ್‌ನ ಪ್ರವರ್ತಕ ಜಿ.ಶಂಕರ್ ಉದ್ಘಾಟಿಸಿದರು. ಬನ್ನಂಜೆ ಬಾಬು ಅಮೀನ್, ಮುಂಬೈಯ ಅಕ್ಷಯ ಮಾಸ ಪತ್ರಿಕೆಯ ಸಂಪಾದಕ ಹರೀಶ್ ಹೆಜಮಾಡಿ, ಸಮಿತಿಯ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಕಾರ್ಯಾಧ್ಯಕ್ಷ ರಘುನಾಥ್ ಮಾಬಿಯಾನ್ ಉಪಸ್ಥಿತರಿದ್ದರು.

ಸಮಿತಿ ಸಂಚಾಲಕ ಭಾಸ್ಕರ್ ಸುವರ್ಣ ಕನ್ನರ್ಪಾಡಿ ಸ್ವಾಗತಿಸಿದರು. ಕೋಶಾಧಿಕಾರಿ ಸುರೇಶ್ ಮೆಂಡನ್ ವಂದಿಸಿದರು. ಅರ್ಪಿತಾ ಶೆಟ್ಟಿ ಹಾಗೂ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನಾ ಹಿದಾಯತುಲ್ಲ ಸಾಹೇಬ್ ಎರ್ಮಾಳು ಅವರಿಂದ ನಾಗಸ್ವರ ವಾದನ, ರವಿಕುಮಾರ್ ಕಪ್ಪೆಟ್ಟುರವರ ಡೋಲು ವಾದನ, ಏಡ್ಮೇರಿನ ಬೊಗ್ಗು ಪರವರಿಂದ ತುಳು ಪಾಡ್ದನದ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X